spot_img
Wednesday, April 29, 2026
spot_img

ಕುಂದಾಪುರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ


ಕುಂದಾಪುರ, ಆ.31: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ಕುಂದಾಪುರ ತಾಲ್ಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಕಾರ್ಯಕ್ರಮ ತಾಲೂಕು ಕಚೇರಿಯ ಕೋರ್ಟ್ ಹಾಲ್ ನಲ್ಲಿ ಗುರುವಾರ ನಡೆಯಿತು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮ ಉದ್ಘಾಟಿಸಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದರು.

ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ, ತಹಶಿಲ್ದಾರರ ಶೋಭಾಲಕ್ಷ್ಮೀ, ಕಾರ್ಯದರ್ಶಿ ಗಣೇಶ್ ವಿಠ್ಠಲವಾಡಿ, ಯುವಕ ಮಂಡಲದ ಅಧ್ಯಕ್ಷ ಯೋಗೀಶ್ ಕೋಡಿ, ಗುಣರತ್ನ, ಸುಮನಾ ಮೊದಲಾದವರು ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ವಿನಯ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!