Sunday, September 8, 2024

ಸಿಬ್ಬಂದಿಗಳಲ್ಲಿ ದಕ್ಷತೆ, ಪ್ರಾಮಾಣಿಕ ಸೇವೆ ಅಗತ್ಯ -ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು: ಸಿಬ್ಬಂದಿಗಳು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು  .ಅದರಲ್ಲೂ ಬ್ಯಾಂಕ್ ಸಿಬ್ಬಂದಿಗಳ ಸೇವೆ ಇತರರಿಗೆ ಮಾದರಿಯಾಗಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಪ್ರಬಂಧಕ ಅಶೋಕ್ ಕುಮಾರ್ ಕೆ. ನಿವೃತ್ತರಾದ ಹಿನ್ನಲೆಯಲ್ಲಿ  ಬ್ಯಾಂಕ್‌ನ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಮಾಂಕಿನ ಮಹಾಪ್ರಬಂಧಕರಾದ ಅಶೋಕ್ ಕುಮಾರ್‌ ಅವರು ಕೆಳ ಹಂತದ  ಹುದ್ದೆಯಿಂದ ಮಹಾಪ್ರಬಂಧಕ  ಹುದ್ದೆಗೆ ಏರಿದವರು. ಇದಕ್ಕೆ ಅವರ ಕಾರ್ಯತತ್ಪರತೆ, ಸರಳತೆ, ಗ್ರಾಹಕರ ಜತೆಗಿನ ಒಡನಾಟ ಕಾರಣ. ಇವರು ಸುಮಾರು 42ವರ್ಷಗಳ ಕಾಲ ಬ್ಯಾಂಕ್ ನಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿದ್ದಾರೆ. ಅಶೋಕ್ ಕುಮಾರ್ ಅವರ ನಿವೃತ್ತಿ ಜೀವನ ಸುಖ ಶಾಂತಿ ನೆಮ್ಮದಿಯಿಂದ ಇರಲಿ ಎಂದು ರಾಜೇಂದ್ರ ಕುಮಾರ್ ಅವರು ಶುಭ ಆಶಿಸಿದರು.

ಬ್ಯಾಂಕ್‌ನ ವತಿಯಿಂದ ನಿವೃತ್ತರಾಗುತ್ತಿರುವ ಅಶೋಕ್ ಕುಮಾರ್ ಅವರಿಗೆ ಶಾಲು, ಹಾರ, ಫಲವಸ್ತು, ನೆನಪಿನ ಕಾಣಿಕೆ ನೀಡಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ ನಿರ್ದೇಶಕರು ಗೌರವಿಸಿದರು. ಬ್ಯಾಂಕ್‌ನ ಸಿಬ್ಬಂದಿಗಳ ವತಿಯಿಂದ ಸ್ಮರಣಿಕೆ ನೀಡಿ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಯಾಂಕಿನ ನಿರ್ದೇಶಕರರಾದ ಟಿ.ಜಿ., ರಾಜರಾಮ ಭಟ್, ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೋಟ್ಟು,  ಎಸ್.ಬಿ.ಜಯರಾಮ್ ರೈ , ಎಂ.ಮಹೇಶ್ ಹೆಗ್ಡೆ , ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್ ಬಿ ರೈ, ಸದಾಶಿವ ಉಳ್ಳಾಲ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್.  ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್ ಹಾಗೂ ಬ್ಯಾಂಕಿನ ಅಧಿಕಾರಿಗಳು ಉಪಸ್ಥಿತರಿದ್ದರು.

ಬ್ಯಾಂಕಿನ ಸಿಇಒ ಗೋಪಾಲಕೃಷ್ಣ ಭಟ್ ಸ್ವಾಗತಿಸಿದರು. ಉಪಮಹಾಪ್ರಬಂಧಕ ನಿತ್ಯಾನಂದ ಸೇರಿಗಾರ್ ಕಾರ್ಯಕ್ರಮ ನಿರೂಪಿಸಿ, ಕೊನೆಯಲ್ಲಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!