spot_img
Wednesday, April 29, 2026
spot_img

ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆ. 7 ರಂದು ಮುದ್ದುಕೃಷ್ಣ ಸ್ಪರ್ಧೆ

kundapura: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬನ್ನಾಡಿ ಗ್ರಾಮದ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಸೆ. 7 ರಂದು ಸಮಯ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯ ತನಕ ಉಪ್ಲಾಡಿ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಮುದ್ದುಕೃಷ್ಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯು 0-2 ವರ್ಷ, 2-4 ವರ್ಷ ಮತ್ತು 4-6 ವರ್ಷದೊಳಗಿನ ಮಕ್ಕಳಿಗೆ 3 ವಿಭಾಗಗಳಲ್ಲಿರುತ್ತದೆ. ಪ್ರತಿ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಭಾಗವಹಿಸಿದ ಪ್ರತಿ ಮಕ್ಕಳಿಗೂ ಪ್ರಶಂಸನಾ ಪತ್ರ ನೀಡಲಾಗುವುದು. ಸ್ಪರ್ಧಾಳುಗಳಿಗೆ 1 ನಿಮಿಷದ ಕಾಲಾವಕಾಶ ನೀಡಲಾಗುವುದು.

ವೇಷಭೂಷಣಗಳನ್ನು ಸ್ಪರ್ಧಾಳುಗಳಿಗೆ ರೂ.150/- ರಂತೆ ರಿಯಾಯಿತಿ ದರದಲ್ಲಿ ವ್ಯವಸ್ಥೆ ಮಾಡಲಾಗಿದೆ ಹಾಗೂ ಸೆ. 7 ರಂದು ಬೆಳಿಗ್ಗೆ ಗಂಟೆ 8:30 ರೊಳಗೆ ಸ್ಪರ್ಧಾಳುಗಳ ಹೆಸರು ಮತ್ತು ವಿವರವನ್ನು ಯಾವುದೇ ಶುಲ್ಕವಿಲ್ಲದೇ ನೋಂದಾಯಿಸಬಹುದಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬನ್ನಾಡಿ ಸೋಮನಾಥ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!