spot_img
Wednesday, April 29, 2026
spot_img

ಸೆ.6 ರಂದು ಶ್ರೀಕೃಷ್ಣ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆಯು ಸೆಪ್ಟಂಬರ್ 6 ರಂದು ಬೆಳಗ್ಗೆ 10-30 ಕ್ಕೆ ನಗರದ ವಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಎಸ್.ಎಲ್.ಭೋಜೆಗೌಡ ಹಾಗೂ ಡಾ.ತೇಜಸ್ವಿನಿ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘದ ಅಧ್ಯಕ್ಷ ದಯಾನಂದ ಬಿ.ಆರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಳಕಾಡು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!