spot_img
Wednesday, April 29, 2026
spot_img

ಬೆಂಗಳೂರಿನಲ್ಲಿ ಯಕ್ಷಗಾನ ಮುಖವರ್ಣಿಕೆ ಶಿಬಿರ ಉದ್ಘಾಟನೆ

ಬೆಂಗಳೂರು: ಯೋಗಾಭ್ಯಾಸದಂತೆ ದೇಹ ಮತ್ತು ಮನಸ್ಸಿನ ಸಮನ್ವಯಕ್ಕೆ ಯಕ್ಷಗಾನ ಕಲೆ ಪೂರಕ. ನಿರಂತರ ಯಕ್ಷಗಾನ ಅಭ್ಯಾಸ ಮಾಡುವುದರಿಂದ ದೇಹ-ಮನಸ್ಸುಗಳ ಕ್ಷಮತೆ ಹೆಚ್ಚುವುದರಿಂದ ದೈನಂದಿನ ಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಿಕೊಳ್ಳುವುದಕ್ಕೆ ಸಾಧ್ಯವಿದೆ. ಕಲೆಯಲ್ಲಿ ತೊಡಗಿಕೊಳ್ಳುವುದಕ್ಕೆ ವೃತ್ತಿಪರತೆಯ ಅಗತ್ಯವಿದೆ. ಯಕ್ಷಗಾನ ಕಲಾವಿದರಾದವರು ತಾವೇ ವೇಷ ಧರಿಸುವುದನ್ನು ಅಭ್ಯಾಸ ಮಾಡಕೊಳ್ಳಬೇಕು. ಅದರಲ್ಲಿಯೂ ಯಕ್ಷಗಾನ ಮೇಕಪ್‌ನಲ್ಲಿ ಪರಿಣಿತಿ ಇದ್ದರೆ ಹೆಚ್ಚಿನ ಸಾಧನೆ ಮಾಡಲು ಸಾಧ್ಯ. ಯಕ್ಷಾಂಗಣ ಟ್ರಸ್ಟ್ ವಿದ್ಯಾರ್ಥಿಗಳಿಗೆ ಮುಖವರ್ಣಿಕೆ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಎಂದು  ಉಡುಪಿ ಎಂ.ಜಿ.ಎಂ. ಕಾಲೇಜಿನ ಉಪನ್ಯಾಸಕ ಮತ್ತು ಯಕ್ಷಗಾನ ಕಲಾವಿದರಾದ ರಾಘವೇಂದ್ರ ತುಂಗಹೇಳಿದರು.

ಅವರು ಬೆಂಗಳೂರಿನ ತ್ಯಾಗರಾಜ ನಗರದಲ್ಲಿ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್‌ನವರು ಸೆ.೩ರಂದು ಆಯೋಜಿಸಿರುವ ಯಕ್ಷಗಾನ ಮುಖವರ್ಣಿಕೆ ಶಿಬಿರದ ಉದ್ಘಾಟನೆಯನ್ನು ವಿದ್ಯಾರ್ಥಿಗಳಿಗೆ ಮುಖವರ್ಣಿಕೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ವೇದಿಕೆಯಲ್ಲಿ ಯಕ್ಷದೇಗುಲದ ಸುದರ್ಶನ ಉರಾಳ, ಯಕ್ಷ ಗುರು ಪ್ರಿಯಾಂಕ ಕೆ. ಮೋಹನ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸರಸ್ವತಿ ನಿರೂಪಿಸಿದರು. ಈ ಯಕ್ಷಗಾನ ಶಿಬಿರಕ್ಕೆ 35-40 ಮಕ್ಕಳು ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!