spot_img
Wednesday, April 29, 2026
spot_img

ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ


ಕುಂದಾಪುರ: ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಧ್ಯಾಪಕರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ವಿ.ನಾರಾಯಣಸ್ವಾಮಿ ರಾಧಾಕೃಷ್ಣನ್ ಅವರ ಬದುಕೆ ಆದರ್ಶ ಪ್ರಾಯ ಅವರು ವ್ಯಕ್ತಿತ್ವವೇ ಭವ್ಯ. ಅವರು ಬದುಕಿನ ಪುಟಗಳಲ್ಲಿ ಶಿಸ್ತುಬದ್ಧತೆ, ಜ್ಞಾನದ ಆಳ ಶಿಕ್ಷಕರಾದ ನಮಗೆ ದಾರಿದೀಪವಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಡಿ.ಲಲಿತಾದೇವಿ ವಹಿಸಿದ್ದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಐಕ್ಯೂ‌ಎಸಿ ಸಂಯೋಜಕರಾದ ಡಾ.ಕೆ.ಎಂ.ವಿಜಯ ಕುಮಾರ್ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ.ಎಂ.ವಿ ನಾರಾಯಣ ಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಅಧ್ಯಾಪಕರ ಸಂಘದ ಉಪಾಧ್ಯಕ್ಷೆ ಸರೋಜಾ ಎಂ. ಕಾರ್ಯಕ್ರಮ ನಿರ್ವಹಿಸಿದರು. ಖಜಾಂಚಿ ದುರ್ಗಾಪ್ರಸಾದ್ ಮಯ್ಯ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಸುಮಲತಾ ನಾಯ್ಕ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!