spot_img
Wednesday, April 29, 2026
spot_img

ದೇವಲ್ಕುಂದ, ಆತ್ರಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ


ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ತಾಲೂಕು, ವಂಡ್ಸೆ ವಲಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ದೇವಲ್ಕುಂದ ಹಾಗೂ ಆತ್ರಾಡಿ ಒಕ್ಕೂಟದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ ನಡೆಯಿತು ಹಕ್ಲಾಡಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಪ್ರೇಮ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ಉದ್ಘಾಟನೆ ಮಾಡಿದರು.

ಅತಿಥಿಗಳಾಗಿ ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅದ್ಯಕ್ಷರಾದ ನವೀನ್‌ಚಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶೋಭ ಜಿ ಪುತ್ರನ್, ಶರತ್ ಕುಮಾರ್ ಶೆಟ್ಟಿ, ದೇವಲ್ಕುಂದ, ಆತ್ರಾಡಿ ಒಕ್ಕೂಟದ ನಿಕಟಪೂರ್ವ, ಹಾಗೂ ನೂತನ ಅಧ್ಯಕರು, ಪದಾಧಿಕಾರಿಗಳು ಉಪಸ್ಥಿತ ರಿದ್ದರು.

ದೇವಲ್ಕುಂದ ಒಕ್ಕೂಟದ ಶ್ರೀ ವಿಷ್ಣುಮೂರ್ತಿ ಎಂಬ ೫೦ನೆ ಸಂಘ ಉದ್ಘಾಟನೆ ಮಾಡಲಾಯಿತು. ವಂಡ್ಸೆ ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ ಕಾರ್ಯಕ್ರಮ ನಿರೂಪಿಸಿದರು. ನೂತನ ಅಧ್ಯಕ್ಷರಾದ ಶಶಿಧರ ಶೆಟ್ಟಿ ಸ್ವಾಗತಿಸಿದರು. ದೇವಲ್ಕುಂದ ಸೇವಾಪ್ರತಿನಿಧಿ ಯಶೋಧ ವರದಿ ಮಂಡಿಸಿದರು. ಸೇವಾಪ್ರತಿನಿಧಿ ವನಿತಾ ನೂತನ ಪದಾಧಿಕಾರಿಗಳ ಪರಿಚಯ ಮಾಡಿದರು. ಸೇವಾಪ್ರತಿನಿಧಿ ವೀಣಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!