spot_img
Wednesday, April 29, 2026
spot_img

ಎಸ್ ಸಿಡಿಸಿಸಿ ಬ್ಯಾಂಕ್ ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

ಮಂಗಳೂರು : ಸಹಕಾರಿ  ಬ್ಯಾಂಕಿಂಗ್ ರಂಗದಲ್ಲಿ 109 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿ ಜನಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್‌)ಗೆ ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಗುರುವಾರ ಬೆಂಗಳೂರುನಲ್ಲಿ ಪ್ರದಾನ ಮಾಡಲಾಯಿತು.

ಕರ್ನಾಟಕ  ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ನೀಡುತ್ತಿರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಬೆಳ್ಳಿಪ್ರಕಾಶ್ ಅವರಿಂದ  ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರಕುಮಾರ್ ಹಾಗೂ  ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಅವರು ಸ್ವೀಕರಿಸಿದರು.

21ನೇ ಬಾರಿ ಪ್ರಶಸ್ತಿ: ನಿರಂತರ ಸಮಾಜಮುಖಿ ಸೇವೆಗಳೊಂದಿಗೆ ತನ್ನ ಗ್ರಾಹಕರಿಗೆ ಸಂತೃಪ್ತ ಸೇವೆಯನ್ನು ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 2021-22ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು, ಲೆಕ್ಕ ಪಲಿಶೋಧನೆಯಲ್ಲಿ ‘ಎ’ ವರ್ಗವನ್ನು ಪಡೆದು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಮಾತ್ರವಲ್ಲ 21 ಬಾರಿ ಅಪೆಕ್ಸ್  ಬ್ಯಾಂಕ್ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಎಸ್‌ ಸಿಡಿಸಿಸಿ ಬ್ಯಾಂಕ್ ಪಾತ್ರವಾಗಿದೆ.

ಜನಸ್ನೇಹಿ ಬ್ಯಾಂಕ್  : ಎಸ್ ಸಿಡಿಸಿಸಿ ಬ್ಯಾಂಕ್ ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಸ್ನೇಹಿ ಬ್ಯಾಂಕ್ ಎನಿಸಿಕೊಂಡಿದೆ. ತನ್ನ 111 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡ ಕೋರ್ ಬ್ಯಾಂಕಿಂಗ್‌ನಂತಹ ಹೊಸತನದ ಬ್ಯಾಂಕಿಂಗ್‌ ಸೇವೆಯನ್ನು ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಮಾತ್ರವಲ್ಲ ಮಂಗಳೂರು ಮತ್ತು ಉಡುಪಿಯಲ್ಲಿ ಬ್ಯಾಂಕ್ ಆನ್ ವೀಲ್ ಎನ್ನುವ ಪರಿಕಲ್ಪನೆಯಲ್ಲಿ ಮೊಬೈಲ್ ಬ್ಯಾಂಕಿಂಗ್ ನಂತಹ ವಿನೂತನ ಬ್ಯಾಂಕಿಂಗ್‌ ಸೇವೆಯನ್ನು ನೀಡುತ್ತಿದೆ. ಇಂತಹ ಬ್ಯಾಂಕಿಂಗ್ ವ್ಯವಸ್ಥೆಯನ್ನು ರಾಜ್ಯ ಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎಂಬ ಮನ್ನಣಿಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಪಾತ್ರವಾಗಿರುತ್ತದೆ. ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡಾ ನೂರರ ಸಾಧನೆಯನ್ನು ಕಳೆದ 28 ವರ್ಷಗಳಿಂದ ಮಾಡುತ್ತಿರುವುದು ರಾಷ್ಟ್ರೀಯ ದಾಖಲೆ ಆಗಿದೆ.

ಸೇವೆಯೇ ಮುಖ್ಯ ಧ್ಯೇಯ : ಸೇವೆಯನ್ನೇ ಮುಖ್ಯ ಧ್ಯೇಯವನ್ನಾಗಿಟ್ಟುಕೊಂಡು ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಅವರ ದಕ್ಷ ಸಾರಥ್ಯದಲ್ಲಿ ಕಳೆದ 29 ವರ್ಷಗಳಿಂದ ಯಶಸ್ಸಿನ ಪಥದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಮುನ್ನಡೆಯನ್ನು ಕಾಣುತ್ತಿದೆ. ವರದಿ ವರ್ಷದಲ್ಲಿ ಬ್ಯಾಂಕಿಗೆ ಬ್ಯಾಂಕೋ ಬ್ಲೂ ರಿಬ್ಬನ್ ಪ್ರಶಸ್ತಿ ಹಾಗೂ ಕೇಂದ್ರ ಸರಕಾರದ ಅಟಲ್ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಎರಡು ಬಾರಿ  ಎಪಿವೈ ರಾಷ್ಟ್ರೀಯ ಪ್ರಶಸ್ತಿ ಬ್ಯಾಂಕಿಗೆ  ಲಭಿಸಿದೆ.

ಬೆಂಗಳೂರಿನಲ್ಲಿ  ಗುರುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಪೆಕ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಜಿ.ಡಿ.ಹರೀಶ್‌, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್‌. ದೇವರಾಜ್,  ಸಚಿವರು ಹಾಗೂ ನಿರ್ದೇಶಕರಾದ ಶಿವಾನಂದ ಎಸ್. ಪಾಟೀಲ್, ನಿರ್ದೇಶಕರುಗಳಾದ ಸಿದ್ಧಪ್ಪ ಕಲ್ಲಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಶಿವರಾಮ್‌ ಮಹಾಬಲೇಶ್ವರ ಹೆಬ್ಬಾರ್, ಧಾರಾವಾಡ ಡಿಸಿಸಿ, ಬ್ಯಾಂಕ್‌ನ ಅಧ್ಯಕ್ಷ ಮಲ್ಲಕಾರ್ಜುನ ಎ ಹೊರಕೇರಿ, ಅಪೆಕ್ಸ್ ಬ್ಯಾಂಕಿನ ಮುಖ್ಯ ಪ್ರಧಾನ ವ್ಯವಸ್ಥಾಪಕ ಅಶ್ವಥ್ ನಾರಾಯಣ ಮೊದಲಾದವರು ಉಪಸ್ಥಿತರಿದ್ದರು. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!