spot_img
Wednesday, April 29, 2026
spot_img

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

ಉಡುಪಿ: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ದಿನಾಂಕ:31-03-2023 ರ ಮೊದಲು ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಪೈಕಿ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತಿಯ ಪಿಯುಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಕಾರ್ಮಿಕ ಅಧಿಕಾರಿ, ಉಡುಪಿ ಉಪವಿಭಾಗ, ಇವರ ವ್ಯಾಪ್ತಿಯಲ್ಲಿ ಬರುವ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಅರ್ಜಿ ನಮೂನೆಯನ್ನು ತಾವು ನೋಂದಣಿ ಮಾಡಿದ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಅದೇ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 22 ರಂದು ಸಂಜೆ 5:30 ಗಂಟೆ ಕೊನೆಯ ದಿನಾಂಕವಾಗದಿದು, ತದನಂತರ ಯಾವುದೇ ಮೂಲದಿಂದ ಬರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿಯವರ ಕಛೇರಿ, ಉಡುಪಿ ಜಿಲ್ಲೆ ಅನ್ನು ಸಂರ್ಪಕಿಸಬಹುದಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!