spot_img
Wednesday, April 29, 2026
spot_img

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ: ವಾರ್ಷಿಕ ರೂ.65 ಲಕ್ಷ ನಿವ್ವಳ ಲಾಭ-ಹೆಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ


ಕುಂದಾಪುರ, ಸೆ.9: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘವು ಪ್ರಗತಿಯ ಪಥದಲ್ಲಿ ಮುನ್ನೆಡೆಯುತ್ತಿದೆ. ವರದಿ ವರ್ಷದಲ್ಲಿ ಸಂಘವು 11 ಕೋಟಿ ರೂ. ಸಾಲ ನೀಡಿದೆ. ರೂ.20 ಕೋಟಿಗೂ ಮಿಕ್ಕಿ ಠೇವಣಾತಿ ಸಂಗ್ರಹಿಸಿದೆ. ರೂ.65,53,676 ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಹೆಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು.

ಸೆ.9ರಂದು ಕುಂದಾಪುರದ ಶರೋನ್ ಸಭಾಂಗಣದಲ್ಲಿ ನಡೆದ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಮಿತ ಇದರ 2022-23ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘವು ತಾಲೂಕು ಮಟ್ಟದ ಸಹಕಾರಿ ಸಂಸ್ಥೆಯಾಗಿದ್ದು ಪ್ರಾಥಮಿಕ ಸಹಕಾರ ಸಂಘಗಳೇ ನಮ್ಮ ಬೆನ್ನೆಲುಬು. ಪ್ರಾಥಮಿಕ ಸಹಕಾರ ಸಂಘಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಸಾಮಾಗ್ರಿಗಳನ್ನು ಸರಬರಾಜು ಮಾಡುವ ಕಾರ್ಯದೊಂದಿಗೆ ಆರ್ಥಿಕ ಚಟುವಟಿಕೆಯನ್ನು ನಡೆಸಲಾಗುತ್ತಿದೆ. ಕುಂದಾಪುರ ಪ್ರಧಾನ ಕಛೇರಿ, ಬೈಂದೂರು, ಸಿದ್ಧಾಪುರ ಶಾಖೆಗಳಲ್ಲಿ ಬ್ಯಾಂಕಿಂಗ್ ವ್ಯವಹಾರ ನಡೆಸಲಾಗುತ್ತಿದೆ ಎಂದರು.

ಸಂಘದ ಮೂಲ ಉದ್ದೇಶ ಈಡೇರಿಸುವ ಸಲುವಾಗಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ರೈತರು ಬೆಳೆದ ತರಕಾರಿ ಹಾಗೂ ಹಣ್ಣು ಹಂಪಲುಗಳನ್ನು ಮುಕ್ತವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಕುಂದಾಪುರ ಸಂಗಮ್ ಸರ್ಕಲ್ ಬಳಿ ರೈತರ ತರಕಾರಿ ಮಾರುಕಟ್ಟೆಯನ್ನು ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ನಿರ್ದೇಶಕರಾದ ಎಂ.ಮೋಹನದಾಸ್ ಶೆಟ್ಟಿ ಮಲ್ಯಾಡಿ, ಕೆ.ಮೋಹನ್ ಪೂಜಾರಿ ಉಪ್ಪುಂದ, ಆನಂದ ಬಿಲ್ಲವ ಉಪ್ಪಿನಕುದ್ರು, ಕೆ.ಭುಜಂಗ ಶೆಟ್ಟಿ ಕೆರಾಡಿ, ರವಿ ಗಾಣಿಗ ಆಜ್ರಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಸ್.ಜಯರಾಮ ಶೆಟ್ಟಿ ಬೆಳ್ವೆ, ಕೆ.ಸುಧಾಕರ ಶೆಟ್ಟಿ ಬಾಂಡ್ಯ, ಹೆಚ್.ದೀನಪಾಲ್ ಶೆಟ್ಟಿ ಮೊಳಹಳ್ಳಿ, ಹೆಚ್.ಚಂದ್ರಶೇಖರ ಶೆಟ್ಟಿ ಚಿತ್ತೂರು, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಎಂ.ಮಹೇಶ್ ಹೆಗ್ಡೆ ಮೊಳಹಳ್ಳಿ, ಸರಕಾರದ ಪ್ರತಿನಿಧಿ ಅರುಣ್ ಕುಮಾರ್ ಎಸ್.ವಿ. ಉಪಸ್ಥಿತರಿದ್ದರು.

ರತ್ನ ಪ್ರಾರ್ಥನೆ ಮಾಡಿದರು. ಸಂಘದ ಉಪಾಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಎಚ್.ಶೋಭಾಕೃಷ್ಣ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!