spot_img
Wednesday, April 29, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ


ಕುಂದಾಪುರ: ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ನಮ್ಮ ಬದುಕಿನ ಸವಾಲುಗಳನ್ನು ಎದುರಿಸಲು ಪೂರಕವಾಗಿದೆ. ಜೀವನ ಕೌಶಲ್ಯದ ಜೊತೆಗೆ ಕ್ರೀಯಾಶೀಲತೆ, ಸೃಜನಶೀಲತೆ, ಸಂವಹನ ಕಲೆ, ನಾಯಕತ್ವಗುಣ ಬೆಳೆಸಿಕೊಳ್ಳಲು ಕಾಲೇಜಿನಲ್ಲಿರುವ ವಿವಿಧ ವೇದಿಕೆಗಳು ಅತ್ಯವಶ್ಯಕವಾದುದು. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಚಿಂತಿಸಬೇಕು ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೆಸ್ಕತ್ತೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲೀಷ್ ಶಿಕ್ಷಕರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಅಶೋಕ್ ತೆಕ್ಕಟ್ಟೆ ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೨೩-೨೪ನೇ ಸಾಲಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು.

ಉಪಪ್ರಾಂಶುಪಾಲರು ಹಾಗೂ ವಿವಿಧ ವೇದಿಕೆಗಳ ಸಂಯೋಜಕರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಅತಿಥಿಗಳನ್ನು ಪರಿಚಯಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿವಿಧ ವೇದಿಕೆಗಳ ಸಂಯೋಜಕರಾದ ಹರೀಶ್ ಬಿ. ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಯೋಗೀಶ್ ಶ್ಯಾನುಭೋಗ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!