spot_img
Wednesday, April 29, 2026
spot_img

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ: ರೂ. 75. 20 ಲಾಭ ; ಸದಸ್ಯರಿಗೆ ಶೇ. 20 ಡಿವಿಡೆಂಡ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶಕ್ತಿ ಆಗಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ತನ್ನ ಸದಸ್ಯರೆಲ್ಲರ ಸಂಪೂರ್ಣ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. ಸಂಘವು 2022-23ನೇ ಸಾಲಿನಲ್ಲಿ ರೂ.75.20 ಲಕ್ಷ ಲಾಭ ಗಳಿಸಿ , ತನ್ನ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಎಸ್. ಜಗದೀಶ್ಚಂದ್ರ ಅಂಚನ್ ತಿಳಿಸಿದ್ದಾರೆ.

ನಗರದ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜದ ಬಳಿ ಇರುವ ಸಂಘದ ಪ್ರಧಾನ ಕಛೇರಿಯ ಸಪ್ತವರ್ಣ ಸಭಾಂಗಣದಲ್ಲಿ ಶನಿವಾರ ನಡೆದ 92ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೂ.153.68 ಕೋಟಿ ವ್ಯವಹಾರ: ಸಹಕಾರ ಸಂಘಗಳ ನೌಕರ ಸದಸ್ಯರುಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಠೇವಣಿಗಳಿಗೆ ಆಕರ್ಷಕ ಬಡ್ಡಿಯನ್ನು ನೀಡಿಯೂ ಸಂಘವು ವರದಿ ವರ್ಷದಲ್ಲಿ ಅಧಿಕ ಲಾಭವನ್ನು ಗಳಿಸಿದೆ . ಸಂಘವು 1116 ಮಂದಿ ಸದಸ್ಯರನ್ನು ಹೊಂದಿದೆ . ವರದಿ ವರ್ಷದಲ್ಲಿ ಸಂಘವು ರೂ.34.13 ಲಕ್ಷ ಪಾಲು ಬಂಡವಾಳವನ್ನು ಹೊಂದಿದ್ದು, ರೂ. 4.95 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ. ಠೇವಣಿ ಸಂಗ್ರಹಣೆಯಲ್ಲೂ ಸಂಘವು ಗಮನಾರ್ಹ ಸಾಧನೆಗೈದಿದೆ. ಕಳೆದ ವರ್ಷಾಂತ್ಯಕ್ಕೆ ಠೇವಣಿ ರೂ.74.19 ಕೋಟಿಯಿಂದ ವರದಿ ವರ್ಷದಲ್ಲಿ ರೂ.84.53 ಕೋಟಿಗೆ ಏರಿಕೆಯಾಗಿದೆ . ಸಾಲ ಮುಂಗಡದಲ್ಲೂ ಏರಿಕೆಯಾಗಿದ್ದು ರೂ.58.09 ಕೋಟಿಯಿಂದ ರೂ.69.15 ಕೋಟಿಗೆ ಹೆಚ್ಚಳವಾಗಿದೆ. ಸಂಘದ ಒಟ್ಟು ವ್ಯವಹಾರವೂ ಕೂಡ ರೂ.132.28 ಕೋಟಿಯಿಂದ ರೂ. 153.68 ಕೋಟಿಗೆ ಏರಿಕೆಯಾಗಿದೆ ಎಂದು ಜಗದೀಶ್ಚಂದ್ರ ಅಂಚನ್ ತಿಳಿಸಿದರು.

ಅಭಿವೃದ್ಧಿಗೆ ನೌಕರ ಸದಸ್ಯರೇ ಜೀವಾಳ : ಸಂಘಕ್ಕೆ ನೌಕರ ಸದಸ್ಯರೇ ಜೀವಾಳ. ಸಂಘದ ವ್ಯವಹಾರ ಅಭಿವೃದ್ಧಿಯಲ್ಲಿ ಸದಸ್ಯರೆಲ್ಲರ ಬೆಂಬಲ, ಪೆÇ್ರೀತ್ಸಾಹ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರೆಲ್ಲರ ಸಂಘಟಿತ ಕಾರ್ಯನಿರ್ವಹಣೆಯಿಂದ ಸಂಘವು ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗಿದೆ. ನಗರದ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜದ ಬಳಿ ಸಂಘವು 10 ಸೆಂಟ್ಸ್ ಸ್ಥಳದಲ್ಲಿ ಎರಡು ಮಹಡಿಗಳ ಸುಸಜ್ಜಿತ ‘ಉನ್ನತಿ ‘ ಸ್ವಂತ ಕಟ್ಟಡವನ್ನು ಹೊಂದಿದ್ದು, ಈ ಕಟ್ಟಡದಲ್ಲಿ ಕೇಂದ್ರ ಕಚೇರಿ , ಕೊಡಿಯಾಲ್ ಬೈಲ್ ಶಾಖೆ , ಆಡಳಿತ ಮಂಡಳಿ ಸಭಾಂಗಣ ಸೇರಿದಂತೆ ಸಪ್ತವರ್ಣ ಸಭಾಭವನವೂ ಇದೆ . ಸಂಘದ ಸದಸ್ಯರಿಗೆ ಶುಭ ಸಮಾರಂಭಗಳಿಗೆ ಈ ಸಭಾಭವನವನ್ನು ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಇದರ ಪ್ರಯೋಜನವನ್ನು ಸದಸ್ಯರು ಪಡೆದು ಕೊಳ್ಳಬೇಕೆಂದರು.

ನಾಲ್ಕು ಶಾಖೆಗಳು : ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರುನಲ್ಲಿ ಎರಡು , ಉಡುಪಿ ಹಾಗೂ ಪುತ್ತೂರುನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ . ಈ ಎಲ್ಲಾ ಶಾಖೆಗಳು ಸದಸ್ಯರೆಲ್ಲರ ಸಹಕಾರ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಸತತ 6ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ: ಸಂಘದ ಪ್ರಗತಿಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ಕಳೆದ 5 ವರ್ಷಗಳಿಂದ ( 2017-18, 2018-19, 2019-20 , 2020-21, 2021-22 ) ಸಾಧನಾ ಪ್ರಶಸ್ತಿಯನ್ನು ನೀಡುತ್ತಿದೆ. 2022-23ನೇ ಸಾಲಿನಲ್ಲೂ ಸಂಘವು ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಸತತ ಆರನೇ ಬಾರಿಗೆ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ತಿಳಿಸಿದರು.

ಡಾ.ಎಂಎನ್‍ಆರ್ ಮಾರ್ಗದರ್ಶಕರು: ಸಂಘವು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರ ರಂಗದ ಅಗ್ರಗಣ್ಯ ನಾಯಕರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರ ಮಾರ್ಗದರ್ಶನ ಹಾಗೂ ಪೆÇ್ರೀತ್ಸಾಹ ಕಾರಣವಾಗಿದೆ. ಅವರಿಗೆ ಸರ್ವ ಸದಸ್ಯರ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಜಗದೀಶ್ಚಂದ್ರ ಅಂಚನ್ ಕೃತಜ್ಞತೆಯನ್ನು ಸಲ್ಲಿಸಿದರು.

ಪ್ರತಿಭಾ ಪುರಸ್ಕಾರ : ಸಂಘದ ಸದಸ್ಯರು, ಭಗವತಿ ಸಹಕಾರ ಬ್ಯಾಂಕ್ ಉದ್ಯೋಗಿ ಶ್ರೀಮತಿ ಯಶವಂತಿ , ಹಾಗೂ ಪುತ್ತೂರು ಗ್ಲೋರಿಯಾ ಕ್ರೆಡಿಟ್ ಸಹಕಾರ ಸಂಘದ ಉದ್ಯೋಗಿ ಶ್ರೀಮತಿ ಓಲಿಯಾ ಪ್ರಶಾಂತಿ ರೆಬೆಲ್ಲೊ ಇವರು ಎಚ್ ಡಿಸಿಎಂ ಪರೀಕ್ಷೆಯಲ್ಲಿ ಅಗ್ರ ಶ್ರೇಯಾಂಕದಲ್ಲಿ ಉತ್ತೀರ್ಣರಾಗಿ ಚಿನ್ನದ ಪದಕ ಪಡೆದಿದ್ದು, ಇವರಿಬ್ಬರನ್ನು ಮಹಾಸಭೆಯಲ್ಲಿ ಪುರಸ್ಕರಿಸಿ ಪೆÇ್ರೀತ್ಸಾಹ ಧನ ನೀಡಿ ಅಭಿನಂದಿಸಲಾಯಿತು. ಮಾತ್ರವಲ್ಲ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಅಧಿಕ ಅಂಕಗಳೊಂದಿಗೆ ತೇರ್ಗಡೆಯಾದ ಸಂಘದ ಸದಸ್ಯರ ಒಟ್ಟು38 ಪ್ರತಿಭಾನ್ವಿತ ಮಕ್ಕಳಿಗೆ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಪೆÇ್ರೀತ್ಸಾಹ ಧನವನ್ನು ನೀಡಿ ಪುರಸ್ಕರಿಸಲಾಯಿತು.

ಸನ್ಮಾನ : ಸಂಘದ ಮಾಜಿ ಗೌರವ ಕಾರ್ಯದರ್ಶಿ , ಎಸ್ ಸಿಡಿಸಿಸಿ ಬ್ಯಾಂಕ್ ಮಹಾಪ್ರಬಂಧಕ ಅಶೋಕ್ ಕುಮಾರ್ ಹಾಗೂ ಮಾಜಿ ನಿರ್ದೇಶಕ , ಮಂಗಳೂರು ಗೃಹ ನಿರ್ಮಾಣ ಸಹಕಾರ ಸಂಘದ ಉದ್ಯೋಗಿ ಚಂದ್ರಕಾಂತ್ ಇವರು ಈಚೆಗೆ ಸೇವಾ ನಿವೃತ್ತಿ ಹೊಂದಿದ್ದು ಇವರಿಬ್ಬರನ್ನು ಮಹಾಸಭೆಯಲ್ಲಿ ಸನ್ಮಾನಿಸಲಾಯಿತು.

ಮಹಾಸಭೆಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸಂಘದ ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ , ನಿರ್ದೇಶಕರುಗಳಾದ ಪುಷ್ಪರಾಜ್ ಎಂ.ಎಸ್. ರಾಘವ ಆರ್ ಉಚ್ಚಿಲ್, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ, ವಿಶ್ವನಾಥ ಕೆ ಟಿ, ಶಿವಾನಂದ ಪಿ, ಗಿರಿಧರ್ , ಅರುಣ್ ಕುಮಾರ್, ವಿಶ್ವನಾಥ್ ಅಮೀನ್ , ಮೋಹನ್ ಎನ್ , ಶ್ರೀಮತಿ ಚಂದ್ರಕಲಾ , ಶ್ರೀಮತಿ ಗೀತಾಕ್ಷಿ ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವಾಗತಿಸಿ , ಸಂಘದ 2022-23ನೇ ಸಾಲಿನ ವಾರ್ಷಿಕ ವರದಿ, ಲೆಕ್ಕ ಪತ್ರವನ್ನು ಮಂಡಿಸಿದರು. ಉಪಾಧ್ಯಕ್ಷರಾದ ದಿವಾಕರ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!