spot_img
Wednesday, April 29, 2026
spot_img

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

 ಕುಂದಾಪುರ : ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ  ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ ಹಾಗೂ ಬಾಲಕಿಯರ ತ್ರೋಬಾಲ್ ಪಂದ್ಯಾಟ ದಿನಾಂಕ 09.09.2023 ರಂದು ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಜರುಗಿತು.

        ಉಡುಪಿ  ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜಿಲ್ಲಾಧ್ಯಕ್ಷರಾದ  ಜೀವನ್ ಕುಮಾರ್ ಶೆಟ್ಟಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿ, ತ್ರೋಬಾಲ್ ಪಂದ್ಯಾಟದ  ಇಂದಿನ ಗೆಲುವು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಲಿ ಎಂದು ಶುಭ ಹಾರೈಸಿದರು. ವೆಂಕಟರಮಣ ದೇವ  ಶೈಕ್ಷಣಿಕ ಮತ್ತು ಸಾಂಸ್ಕೃತಿಕ  ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷ  ಸ್ಥಾನ ವಹಿಸಿ ಆರೋಗ್ಯ   ಸದೃಡವಾಗಲು ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ   ಎಂದರು.ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ನಾಗರಾಜ ಶೆಟ್ಟಿ, ಕುಂದಾಪುರ ತಾಲೂಕು ಕ್ರೀಡಾ ಸಂಘದ ಸಂಯೋಜಕರಾದ ರಾಮ ಶೆಟ್ಟಿ, ಶ್ರೀ ವೆಂಕಟರಮಣ ಪದವಿ ಪೂರ್ವ  ಕಾಲೇಜಿನ ಪ್ರಾಂಶುಪಾಲರಾದ  ಶ್ರೀಮತಿ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ  ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ   ಕೃಷ್ಣ  ಅಡಿಗ , ಪ್ರಾಥಮಿಕ  ವಿಭಾಗದ ಮುಖ್ಯೋಪಾಧ್ಯಾಯಿನಿ  ಶ್ರೀಮತಿ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ  ವಿಭಾಗದ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

     ಗಣಿತ ಶಾಸ್ತ್ರ ಉಪನ್ಯಾಸಕ ಸುಜಯ್ ಕೋಟೆಗಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ನ ಉಪನ್ಯಾಸಕಿ ಸೌಮ್ಯ ಕುಂದರ್ ವಂದಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!