spot_img
Wednesday, April 29, 2026
spot_img

ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೆಂಟು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದ್ದು 2023ರ ಸಾಲಿನ ಪ್ರಶಸ್ತಿಗೆ ಖ್ಯಾತ ಶಾಸ್ತ್ರೀಯ ಸಂಗೀತಗಾರ ಡಾ.ವಿದ್ಯಾಭೂಷಣ್ ಅವರನ್ನು ಆಯ್ಕೆ ಮಾಡಲಾಗಿದೆ.

ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ

ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಶ್ರೀಮತಿ ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. ಬಿ. ಎಂ ಹೆಗ್ಡೆ, ಪ್ರಕಾಶ್ ರೈ, ಶ್ರೀಪಡ್ರೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ, ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್ ಅವರಿಗೆ ಪ್ರದಾನ ಮಾಡಲಾಗಿದೆ.

ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!