spot_img
Thursday, April 30, 2026
spot_img

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ: 14% ಡಿವಿಡೆಂಡ್ ಘೋಷಣೆ

ಮರವಂತೆ : ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ,ನಾವುಂದ ಇದರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಶ್ರೀ ಮಹಾಗಣಪತಿ ಮಾಂಗಲ್ಯ ಮಂದಿರ, ನಾವುಂದದಲ್ಲಿ ನಡೆಯಿತು.

ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ,ನಾವುಂದ ಅಧ್ಯಕ್ಷರಾದ ಎಸ್ ರಾಜು ಪೂಜಾರಿ, ಸಂಘದ ಸದ್ಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ವರ್ಷಾಂತ್ಯಕ್ಕೆ ಕಳೆದ ವರ್ಷಕ್ಕಿಂತ ಶೇ. 24ರಷ್ಟು ಹೆಚ್ಚು ಠೇವಣಿ ಸಂಗ್ರಹವಾಗಿದೆ. 2022-23ನೇ ಸಾಲಿನಲ್ಲಿ ರೂಪಾಯಿ 1,25,43,932.38 ಲಾಭ ಗಳಿಸಿದ್ದು, ಸಶೇಕಡಾ 14ರಷ್ಟು ಡಿವಿಡೆಂಡ್ ಘೋಷಣೆ ಮಾಡಲು ತೀರ್ಮಾನಿಸಲಾಗಿದೆ. 2022-33 ಸಾಲಿನಲ್ಲಿ ಸಂಘ ಗುರುತರವಾದ ಸಾಧನೆ ಮಾಡಿದೆ ಎಂಬ ತೃಪ್ತಿ ಇದೆ ಎಂದು ಹೇಳಿದರು.

ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಡುತ್ತಿರುವ ಸಂಸ್ಥೆ ಮೂರು ಶಾಖೆಗಳನ್ನು ಹೊಂದಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಸಂಘದ ಮರವಂತೆ, ಹೇರೂರು ಮತ್ತು ಬಡಾಕೆರೆಯಲ್ಲಿ ಶಾಖೆಗಳು ಪರಿಸರದ ಗ್ರಾಹಕ ಬಂಧುಗಳಿಗೆ ಉತ್ತಮ ಹಾಗೂ ತ್ವರಿತ ಸೇವೆ ನೀಡುವ ಮೂಲಕ ಸಂಉದ ಒಟ್ಟಾರೆ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಲಾಭಾಂಶವನ್ನು ಗ್ರಾಹಕರಿಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುತ್ತಿದೆ. ಕುದ್ರಗೋಡಿನಲ್ಲಿ ಪಡಿತರ ಕೇಂದ್ರ ಮಾಡಬೇಕು ಎಂಬ ಬೇಡಿಕೆಯೂ ಇದೆ. ಆ ಬಗ್ಗೆ ಪರಿಶೀಲನೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಸೊಸೈಟೆಯೂ ಲಾಭಾಂಶವನ್ನು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದರ ಮೂಲಕ ಅವರನ್ನು ಶೈಕ್ಷಣಿಕವಾಗಿ ಉತ್ತೇಜನ ಮಾಡುವ ಕಾರ್ಯವನ್ನು ಹಮ್ಮಿಕೊಂಡಿದೆ. ವೈಯಕ್ತಿಕ ಸಾಲದ ಬಡ್ಡಿದರ ಇಳಿಸುವ ಬಗ್ಗೆ ಸದಸ್ಯರಿಂದ ಬಂದ ಅಭಿಪ್ರಾಯವನ್ನು ಸ್ವೀಕರಿಸಿ, ಆ ಬಗ್ಗೆ ಪರಿಶೀಲಿಸಿ ಮುಂದಿನ ದಿನಗಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ವಾರ್ಷಿಕ ವರದಿ ವಾಚಿಸಿದರು.

ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಎಂ ಚಂದ್ರಶೀಲ ಶೆಟ್ಟಿ, ನಿರ್ದೇಶಕರುಗಳಾದ ವಾಸು ಪೂಜಾರಿ, ಭೋಜ ನಾಯ್ಕ, ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ನಾರಾಯಣ ಶೆಟ್ಟಿ, ರಾಮ, ಶ್ರೀಮತಿ ನಾಗಮ್ಮ, ಶ್ರೀಮತಿ ಸರೋಜ ಆರ್ ಗಾಣಿಗ, ಎಂ. ವಿನಾಯಕ ರಾವ್, ಶಿವರಾಮ ಉಪಸ್ಥಿತರಿದ್ದರು.

ಎಂ. ವಿನಾಯಕ ರಾವ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!