spot_img
Thursday, April 30, 2026
spot_img

ನಾವುಂದ: ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ

ನಾವುಂದ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವತಿಯಿಂದ ರೋಟರಿ ಕ್ಲಬ್ ಕೋಟೇಶ್ವರ ಇವರ ಪ್ರಾಯೋಜಕತ್ವದಲ್ಲಿ 2023ರ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ 16 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ನಾವುಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ಆಶ್ರಯದಲ್ಲಿ ರೋಟರಿ ಕ್ಲಬ್‌ನ ಅಧ್ಯಕ್ಷ ಜಗದೀಶ್ ಮೊಗವೀರ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರಾದ ಗಣಪತಿ ಕೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು. ಜಿಲ್ಲಾ ಎನ್‌ಎಂಎಂಎಸ್ ನೋಡಲ್ ಅಧಿಕಾರಿ ಚಂದ್ರ ನಾಯಕ್ ಎನ್‌ಎಂಎಂಎಸ್ ಪರೀಕ್ಷೆ ಕುರಿತ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ತರಬೇತಿ ನೀಡಿದ ಸಂಪನ್ಮೂಲ ಶಿಕ್ಷಕರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಪತ್ರಕರ್ತ ಸುಬ್ರಮಣ್ಯ ಪಡುಕೋಣೆ, ರೋಟರಿ ಸಂಸ್ಥೆಯ ವಲಯ ಸೇನಾನಿ ಗಜೇಂದ್ರ ಶೆಟ್ಟಿ, ಕಾರ್ಯದರ್ಶಿ ರಾಜೀವ ಮೊಗವೀರ, ನಿವೃತ್ತ ಮುಖ್ಯ ಶಿಕ್ಷಕ ಭಾಸ್ಕರ್ ಶೆಟ್ಟಿ, ವಕ್ವಾಡಿ ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಥ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶಶಿಕಲಾ ನಾಯಕ್ ಸ್ವಾಗತಿಸಿದರು. ರೊಟೇರಿಯನ್ ಕೃಷ್ಣಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು ಶಿಕ್ಷಕ ಕರುಣಾಕರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು ಶಿಕ್ಷಣ ಸಂಯೋಜಕರಾದ ಯೋಗೀಶ್ ಶಿಕ್ಷಕರಾದ ನಾಗರಾಜ್ ಉದಯ್ ಮತ್ತು ರೋಟರಿ ಪದಾಧಿಕಾರಿಗಳು ಸಹಕರಿಸಿದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!