spot_img
Monday, August 10, 2026
spot_img

ಚೈತ್ರ ಕುಂದಾಪುರ ವಂಚನೆ ಪ್ರಕರಣ-ಸಂಘ ಪರಿವಾರ ಹಾಗೂ ಬಿಜೆಪಿ ಮೌನ ಮುರಿಯಲಿ-ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಉದ್ಯಮಿಯೋರ್ವರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಈಗ ಜೈಲು ಪಾಲಾಗಿರುವ ಚೈತ್ರ ಕುಂದಾಪುರ ಇವರ ವಂಚನೆ ಪ್ರಕರಣದ ಕುರಿತು ಸಂಘ ಪರಿವಾರ ಹಾಗೂ ಬಿಜೆಪಿ ನಾಯಕರುಗಳು ಉತ್ತರಿಸಬೇಕು. ಏಕೆಂದರೆ ಈಕೆ ವಂಚನೆಗೆ ಬಳಸಿಕೊಂಡದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಹಾಗೂ ಬಿಜೆಪಿಯನ್ನು. ಈಕೆಗೆ ಸಂಘ ಪರಿವಾರ ಹಾಗೂ ಬಿಜೆಪಿಯ ನಿಕಟ ಸಂಪರ್ಕ ಇರುವುದು ಎಲ್ಲರಿಗೂ ತಿಳಿದ ವಿಚಾರ. ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕ್ರಮಗಳಲ್ಲಿ ಪ್ರಧಾನ ಭಾಷಣಕಾರರಾಗಿ ಭಾಗಾವಹಿಸುತ್ತಿದ್ದವರು ಚೈತ್ರ ಕುಂದಾಪುರ. ಸಂಸ್ಕಾರ, ಸಂಸ್ಕೃತಿ ಬಗ್ಗೆ ಮಾರುದ್ಧ ಭಾಷಣ ಮಾಡುವ ಸಂಸ್ಕಾರ, ಸಂಸ್ಕೃತಿ ಇದೇನಾ? ಸಂಘ ಪರಿವಾರ ಹಾಗೂ ಬಿಜೆಪಿಯವರು ಬೇರೆಯವರಿಗೆ ಉಪದೇಶ ಮಾಡುವ ಮೊದಲು ತಮ್ಮಲ್ಲಿ ಬೆಳೆಸಿಕೊಂಡು ನಂತರ ಬೇರೆಯವರಿಗೆ ಉಪದೇಶ ಮಾಡಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!