Sunday, September 8, 2024

ʼವಿಶ್ವ ಪಾರಂಪರಿಕ ತಾಣಗಳ ಪಟ್ಟಿʼಗೆ ರಾಜ್ಯದ ಐತಿಹಾಸಿಕ ತಾಣಗಳು ಸೇರ್ಪಡೆ | ಮೋದಿ, ಸಿದ್ದರಾಮಯ್ಯ ಸೇರಿ ಪ್ರಮುಖ ಗಣ್ಯರಿಂದ ಅಭಿನಂದನೆ

ಜನಪ್ರತಿನಿಧಿ ವಾರ್ತೆ : ಯುನೆಸ್ಕೊ ʼವಿಶ್ವ ಪಾರಂಪರಿಕ ತಾಣಗಳ ಪಟ್ಟಿʼಗೆ ರಾಜ್ಯದ ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು, ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲ ಹಾಗೂ ಪಶ್ಚಿಮ ಬಂಗಾಳದ ಶಾಂತಿನಿಕೇತನ ತಾಣಗಳು ಸೇರ್ಪಡೆಗೊಂಡಿವೆ.

ರಾಜ್ಯದ ಹಾಸನ ಜಿಲ್ಲೆಯ ಬೇಲೂರು, ಹಳೆಬೀಡು, ಮೈಸೂರು ಜಿಲ್ಲೆಯ ಸೋಮನಾಥಪುರ ದೇಗುಲ ಹಾಗೂ ಪಶ್ಚಿಮ ಬಂಗಾಳದ ಶಾಂತಿನಿಕೇತನ ತಾಣಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿರುವ ಸಂಬಂಧ ತಮ್ಮ ಅಧಿಕೃತ ʼಎಕ್ಸ್‌ʼ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ,   ಹೊಯ್ಸಳರ ಕಾಲದ ರಮ್ಯ ಮತ್ತು ಭವ್ಯವಾದ ಕೆತ್ತನೆಗಳು ಭಾರತದ ಶ್ರೀಮಂತ ಸಾಂಸ್ಕೃತದ ಪರಂಪರೆಯಾಗಿದೆ. ಇದು ನಮ್ಮ ಪೂರ್ವಜರ ಅಸಮಾನ್ಯ ಕಲೆಗೆ ಸಾಕ್ಷಿಯಾಗಿದೆ. ಇದು ಭಾರತೀಯರಿಗೂ ಹೆಮ್ಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಈ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿಕೊಂಡ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರುನಾಡಿನ ಹೊಯ್ಸಳರ ಕಾಲದ ದೇವಾಲಯಗಳು ಸೇರ್ಪಡೆಗೊಂಡಿರುವುದು ಖುಷಿಯ ಜೊತೆಗೆ ಹೆಮ್ಮೆಯ ಸಂಗತಿ ಕೂಡ. ನಾಡಿನ ಪ್ರವಾಸಿ ತಾಣಗಳಿಗೆ ಭೇಟಿನೀಡುವ ಪ್ರವಾಸಿಗರಿಗೆ ವಿಶ್ವಮಟ್ಟದ ಮೂಲಸೌಲಭ್ಯ ಮತ್ತು ಸುರಕ್ಷತೆ ಒದಗಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಐತಿಹಾಸಿಕ ಸ್ಥಳಗಳು ಮತ್ತು ಪುಣ್ಯಕ್ಷೇತ್ರಗಳ ತೊಟ್ಟಿಲು ಕರ್ನಾಟಕಕ್ಕೆ ಸ್ವಾಗತ ಎಂದು ತಮ್ಮ ಅಧಿಕೃತ ʼಎಕ್ಸ್‌ʼ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು, ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಬರೆದುಕೊಂಡಿರುವ ಮಾಜಿ ಪ್ರಧಾನಿ, ಜೆಡಿಎಸ್‌ ನ ಹಿರಿಯ ನಾಯಕ ಎಚ್‌ ಡಿ ದೇವೇಗೌಡ, ಹಾಸನಜಿಲ್ಲೆಯಲ್ಲಿರುವ ಹೊಯ್ಸಳ ಕಾಲದ ಬೇಲೂರು ಮತ್ತು ಹಳೇಬೀಡು ದೇವಾಲಯಗಳು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿರುವುದು ಸಂತಸ ಮೂಡಿಸಿದೆ. ನಾನು ಕೂಡ ಈ ಜಿಲ್ಲೆಯವನೇ ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಇದೆ ಎಂದು ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!