spot_img
Wednesday, March 25, 2026
spot_img

ಯಕ್ಷರಂಗ ಶ್ರೀಮಂತವಾಗಿರಲು ಕಲಾರಾಧಕರ ಪ್ರೋತ್ಸಾಹವೇ ಕಾರಣ-ಶಾಸಕ ಗುರುರಾಜ ಗಂಟಿಹೊಳೆ

ಬೈಂದೂರು: ಯಕ್ಷಗಾನ ಕಲೆಯಲ್ಲಿನ ಭಾಷಾ ಪ್ರಯೋಗ, ಕನ್ನಡ ಭಾಷೆಯ ಸತ್ವವನ್ನು ಜೀವಂತವಾಗಿರಿಸಿದೆ. ಕರಾವಳಿ ಜಿಲ್ಲೆಗಳು ಯಕ್ಷಗಾನದ ನೂರಾರು ಕಲಾವಿದರಿದ್ದು, ಕಲೆಯನ್ನೇ ಉಸಿರಾಗಿಸಿಕೊಂಡವರಾಗಿದ್ದಾರೆ. ಆಧುನಿಕ ಜಗತ್ತಿನ ಮಿತಿಗಳ ನಡುವೆಯೂ ಯಕ್ಷರಂಗ ಶ್ರೀಮಂತವಾಗಿರಲು ಕಲಾರಾಧಕರ ಪ್ರೋತ್ಸಾಹವೇ ಕಾರಣವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಅವರು ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಭಾನುವಾರ ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಹಾಗೂ ಕುಂದಾಪ್ರ ಡಾಟ್ ಕಾಂ ಆಯೋಜಿಸಿದ ೨ ದಿನಗಳ ಯಕ್ಷೋತ್ಸವ ೨೦೨೩ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯಕ್ಷಗಾನ ಮನೊರಂಜನೆಗಷ್ಟೇ ಸೀಮಿತವಾಗಿರದೇ ದೇವರ ಸೇವೆಯೂ ಆಗಿರುವುದರಿಂದ ಆಸಕ್ತರ ನೇತೃತ್ವದಲ್ಲಿ ಮುನ್ನಡೆಯುತ್ತದೆ. ಈ ಕಲೆಗೆ ಅಳಿವೆಂಬುದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಕಿರಿಮಂಜೇಶ್ವರ ಗ್ರಾಪಂ ಅಧ್ಯಕ್ಷರಾದ ಶೇಖರ ಖಾರ್ವಿ, ನಾವುಂದ ಗ್ರಾಪಂ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಸಭಾಭವನ ಮಾಲಿಕರಾದ ಮಂಜುನಾಥ ಉಡುಪ ಮುಖ್ಯ ಅತಿಥಿಗಳಾಗಿದ್ದರು.

ಹಟ್ಟಿಯಂಗಡಿ ಮೇಳದ ಸಂಚಾಲಕರಾದ ರಂಜಿತ್ ಕುಮಾರ್ ಶೆಟ್ಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್.ಜಿ.ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!