spot_img
Wednesday, March 25, 2026
spot_img

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ | 10 ದಿನ ಸಿಸಿಬಿ ಕಸ್ಟಡಿಗೆ ಹಾಲಶ್ರೀ : ಕೋರ್ಟ್‌ ಆದೇಶ

ಜನಪ್ರತಿನಿಧಿ ವಾರ್ತೆ : ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮೂರನೇ ಆರೋಪಿ, ಅಭಿನವ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ವಿಚಾರಣಾ ನ್ಯಾಯಾಲಯ ಆದೇಶಿಸಿದೆ.

ಹಾಲಶ್ರೀ ಪರ ವಕೀಲ ಲೋಕೇಶ್ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಬಗ್ಗೆ ಮಧ್ಯಂತರ ಜಾಮೀನಿಗೆ ಸರ್ಕಾರಿ ವಕೀಲರು ಆಕ್ಷೇಪ ಸಲ್ಲಿಸಿದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸರ್ಕಾರಿ ಪರ ವಕೀಲರಿಗೆ ಸೂಚನೆ ನೀಡಿದ ನ್ಯಾಯಾಲಯ, ಆರೋಪಿ ಹಾಲಶ್ರೀ ಸ್ವಾಮೀಜಿಯನ್ನು ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ವಚಂಚನೆ ಪ್ರಕರಣದಲ್ಲಿ ಮೂರನೇ ಆರೋಪಿ ಹಾಲಶ್ರೀಯನ್ನು ನಿನ್ನೆ(ಮಂಗಳವಾರ, ಸೆ.19)  ಒಡಿಶಾದಿಂದ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿತ್ತು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಂತರ ಆಡುಗೋಡಿಯ ಸಿಸಿಬಿ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು.

ಇನ್ನು, ಸಿಸಿಬಿ ಪೊಲೀಸರು ಮಧ್ಯರಾತ್ರಿಯವರೆಗೂ ಅಭಿನವ ಹಾಲಾಶ್ರೀ ಸ್ವಾಮೀಜಿಯನ್ನು ವಿಚಾರಣೆಗೆ ಒಳಪಡಿಸಿತ್ತು. ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಹಾಲಶ್ರಿ, ಚೈತ್ರಾ ಕುಂದಾಪುರ ಮತ್ತು ಗಗನ್‌ ಕಡೂರು ಬಗ್ಗೆ ಪ್ರಸ್ತಾಪಿಸಿದ್ದಾರೆನ್ನಲಾಗಿದ್ದು, ಹಣಕಾಸಿನ ವ್ಯವಹಾರದ ಬಗ್ಗೆಯೂ ಹಾಲಶ್ರೀ ಬಾಯಿ ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಚೈತ್ರಾ ಕುಂದಾಪುರ ವಂಚನೆಗೆ ಯೋಜನೆ ನಡೆಸಿದ ಸ್ಥಳ ಮಹಜರು :

ಬಹುಕೋಟಿ ವಂಚನೆಯ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚೈತ್ರಾ ಕುಂದಾಪುರ ಮತ್ತು ಆಕೆಯ ಸಹಚರರು ನಡೆಸಿದ ಈ ಹಣಕಾಸಿನ ಬಗ್ಗೆ ಚಿಕ್ಕಮಗಳೂರಿನಲ್ಲಿ  ಆರೋಪಿ ಗಗನ್ ಕಡೂರ್‌ ನನ್ನು ಕರೆದುಕೊಂಡು ಹೋಗಿ ಸ್ಥಳವನ್ನು ಮಹಜರು ಮಾಡಿದ್ದಾರೆ.

ವಿಶ್ವನಾಥ್‌ ಜಿ (ನಕಲಿ ಪಾತ್ರ) ಯನ್ನು ಪ್ರವಾಸಿ ಮಂದಿರದಲ್ಲಿ ಚೈತ್ರಾ ಕುಂದಾಪುರ ಭೇಟಿ ಮಾಡಿಸಿದ್ದರಂತೆ. ಹೀಗಾಗಿಯೆ ಐಬಿಯಲ್ಲಿ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇಲ್ಲಿಯೆ ಈ ವಂಚನೆಯ ಎರಡನೇ ಮೀಟಿಂಗ್‌ ನಡೆದಿದ್ದು ಎಂದು ಹೇಳಲಾಗಿದೆ. ಇನ್ನು ವಿಶ್ವನಾಥ್‌ ಜಿ. ಎಂಬ ನಕಲಿ ಪಾತ್ರದ  ವ್ಯಕ್ತಿಗೆ ಹೇರ್‌ ಕಟ್ಟಿಂಗ್‌ ಮಾಡಿಸಿದ ಶಾಪ್‌ ನಲ್ಲಿ ಸಹ ಸ್ಥಳ ಮಹಜರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!