spot_img
Wednesday, March 25, 2026
spot_img

ಬಿಜೆಪಿ-ಜೆಡಿಎಸ್‌ ಮೈತ್ರಿ : ಪ್ರಧಾನಿ ಮೋದಿಯನ್ನು ಭೇಟಿಯಾಗಲಿರುವ ದೇವೆಗೌಡ | ಕ್ಷೇತ್ರಗಳ ಹಂಚಿಕೆ ಬಗ್ಗೆ ಮಾತುಕತೆ ಸಾಧ್ಯತೆ

ಜನಪ್ರತಿನಿಧಿ ವಾರ್ತೆ :  ಬಿಜೆಪಿ ಮತ್ತು ಜೆಡಿಎಸ್ ಲೋಕಸಭೆಗಾಗಿ ಮೈತ್ರಿ ಆಗುತ್ತಿರುವ ವಿಚಾರ ದಿನದಿಂದ ದಿನಕ್ಕೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸುತ್ತಿದೆ. ಮೈತ್ರಿ ಆಗುವುದು ಖಚಿತವಾದರೂ ಅಧಿಕೃತವಾಗಿ ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ ಇದೇ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್‌ ನೊಂದಿಗೆ ಮಾತುಕತೆಗಾಗಿ ಜೆಡಿಎಸ್‌ ನಾಯಕರಾದ ಎಚ್‌ ಡಿ ಕುಮಾರಸ್ವಾಮಿ ಮತ್ತು ಎಚ್‌ ಡಿ ರೇವಣ್ಣ ಅವರು ಗುರುವಾರ(ಸೆ.21) ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಂಡಿರುವ ಜೆಡಿಎಸ್‌ ವರಿಷ್ಠ ದೇವೇಗೌಡ ದೆಹಲಿಯಲ್ಲಿಯೆ ಉಳಿದುಕೊಂಡಿದ್ದಾರೆ. ನಾಳೆ ಅಥವಾ ನಾಡಿದ್ದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಕ್ಷೇತ್ರಗಳ ಹಂಚಿಕೆ ಬಗ್ಗೆ ಮಾತುಕತೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು,  ಬಿಜೆಪಿಯೊಂದಿಗೆ ಮೈತ್ರಿ ವಿಚಾರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದರ ಬಗ್ಗೆ ನಿರೀಕ್ಷೆಯಿದೆ ಎಂದು ರಾಜ್ಯ ಜೆಡಿಎಸ್‌ ಮೂಲಗಳು ಮಾಹಿತಿ ನೀಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳಲ್ಲಿ ಗೆದ್ದು ತೃಪ್ತಿ ಪಟ್ಟುಕೊಂಡಿದ್ದ ಜೆಡಿಎಸ್‌ ರಾಜ್ಯದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಈಗ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸಲು ಹೊರಟಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕೇವಲ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತ್ತು. ತನ್ನ ಸೋಲನ್ನು ಪರಾಮರ್ಶಿಸಿ ಈಗ ಜೆಡಿಎಸ್‌ ಮೈತ್ರಿಗೆ ಮುಂದಾಗಿದೆ ಎಂಬ ಚರ್ಚೆ ರಾಜ್ಯ ರಾಜಕೀಯ ವಲಯದಲ್ಲಿ ಎದ್ದಿದೆ. ಈ ನಡುವೆ ಕಳೆದ ಕೆಲವು ತಿಂಗಳುಗಳಿಂದೆಚೆಗೆ ಜೆಡಿಎಸ್‌ ಬಿಜೆಪಿ ಮೈತ್ರಿ ಬಗ್ಗೆ ಊಹಾಪೋಹಗಳು ಹರಿದಾಡುತ್ತಿದ್ದು, ನಾಳೆ (ಗುರುವಾರ) ಜೆಡಿಎಸ್‌ ನಾಯಕರಾದ ಎಚ್‌ ಡಿ ಕುಮಾರಸ್ವಾಮಿ ಮತ್ತು ಎಚ್‌ ಡಿ ರೇವಣ್ಣ ದೆಹಲಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಈಗ ಸಂಚಲನ ಮೂಡಿಸಿದೆ.

28 ಲೋಕಸಭಾ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಿಗೆ ಜೆಡಿಎಸ್‌ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಖಚಿತ ಎಂಬ ಮಾಹಿತಿಯನ್ನು ಜೆಡಿಎಸ್‌ ನಾಯಕರು ಸೂಚ್ಯವಾಗಿ ಬಿಟ್ಟುಕೊಟ್ಟಂತಿದೆ. ಈ ಬಗ್ಗೆ ಸೀಟು ಹಂಚಿಕೆಯ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದ ಜೆಡಿಎಸ್‌ ನಾಯಕರು, ನಾಳೆ ಮೋದಿ  ಭೇಟಿ ಸಂದರ್ಭದಲ್ಲಿ ಐದು ಸೀಟುಗಳಿಗಾಗಿ ಬೇಡಿಕೆ ಇಡುವ ಸಾಧ್ಯತೆ ಇದೆ ಎಂಬ ಮಾಹಿತಿ ಜೆಡಿಎಸ್‌ ಮೂಲಗಳಿಂದ ಬಂದಿದೆ.

ಬಿಜೆಪಿ ಮೂಲಗಳ ಪ್ರಕಾರ, ಬಿಜೆಪಿ ಮತ್ತು ಜೆಡಿಎಸ್‌ ಲೋಕಸಭಾ ಚುನಾವಣೆಗಾಗಿ ಮೈತ್ರಿ ಆಗುವುದು  ಖಚಿತ. ಆದರೆ, ಜೆಡಿಎಸ್‌ ಗೆ ಬಿಜೆಪಿ ನಾಲ್ಕು ಸೀಟುಗಳನ್ನು ಬಿಟ್ಟುಕೊಡಲು ನಿರ್ಧರಿಸಿದೆ ಎಂಬ ಮಾಹಿತಿ ಇದೆ. ಇದಕ್ಕೆ ಪೂರಕ ಎಂಬಂತೆ ಜೆಡಿಎಸ್‌ಗೆ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ಸ್ಥಾನಗಳನ್ನು ಬಿಟ್ಟುಕೊಡಲು ಶಾ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಖಚಿತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!