spot_img
Wednesday, March 25, 2026
spot_img

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ | ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿ ದೂರು ನೀಡಿದ ಸಾಲುಮರದ ತಿಮ್ಮಕ್ಕ

ಜನಪ್ರತಿನಿಧಿ ವಾರ್ತೆ : ಉದ್ಯಮಿಗೆ ಬಿಜೆಪಿ ಎಂಎಲ್‌ಎ ಟಿಕೇಟ್‌ ಒದಗಿಸಿಕೊಡುವುದಾಗಿ ನಂಬಿಸಿ ಮಾಡಿದ ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ ಈಗ ದಿನದಿನಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಅಭಿನವ ಹಾಲಶ್ರೀ ಸ್ವಾಮೀಜಿಯವರನ್ನು ನಿನ್ನೆ ಸಿಸಿಬಿ ಪೊಲೀಸ್‌ ತಂಡ ಒಡಿಶಾದಲ್ಲಿ ವಶಪಡಿಸಿಕೊಂಡಿತ್ತು. ಇಂದು (ಸೆ.೨೦) ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ೧೦ ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಈ ನಡುವೆ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಆಗಮಿಸಿದ್ದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ತಮ್ಮ ಹೆಸರನ್ನು ಈ ಪ್ರಕರಣದಲ್ಲಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದರ ಬಗ್ಗೆ ದೂರು ನೀಡಿದ್ದಾರೆ.

ಹೆಸರನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ :

ಕಮಿಷನರ್‌ ಕಚೇರಿಗೆ ಸ್ವತಃ ತಿಮ್ಮಕ್ಕ ಆಗಮಿಸಿ ದೂರು ನೀಡಿದ್ದಾರೆ. ಎಸಿಪಿ ವೇಣುಗೋಪಾಲ್ ಕಮಿಷನರ್ ಅವರ ಪರವಾಗಿ ಸಾಲು ಮರದ ತಿಮ್ಮಕ್ಕ ಅವರು ನೀಡಿದ ದೂರನ್ನು ಸ್ವೀಕರಿಸಿದ್ದಾರೆ. ಸಾಲು ಮರದ ತಿಮ್ಮಕ್ಕ ಹೆಸರು ಬಳಕೆ ಬಗ್ಗೆ ಹಾಗೂ ಸರ್ಕಾರ ನೀಡಿರುವ ಕಾರು ಹಾಗೂ ಸರಕಾರ ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ  ಎಂದು ಸುಳ್ಳು ಆರೋಪ ಮಾಡಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಗಗನ್‌ ಕಡೂರ್‌ಗೂ ನಮಗೂ ಯಾವುದೇ ಸಂಬಂಧವಿಲ್ಲ :

ಇದಕ್ಕೂ ಮೊದಲು ತಮ್ಮ ಮೇಲಿನ ಆರೋಪಗಳ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದ ತಿಮ್ಮಕ್ಕ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗಾದ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿದಂತೆ ಬಂಧನಕ್ಕೊಳಗಾದ ಗಗನ್‌ ಕಡೂರ್‌ ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ, ಸರಕಾರ ಸಾಲು ಮರದ ತಿಮ್ಮಕ್ಕ ಅವರಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿತ್ತು. 

ಗೋವಿಂದ ಬಾಬು ಪೂಜಾರಿ ಅವರನ್ನು ನಂಬಿಸಿ ವಂಚಿಸಲು ಕಾರ್‌ ಬಳಕೆ :

ವಂಚನೆ ಪ್ರಕರಣದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯನಿಕಟವರ್ತಿ ಎಂಬಂತೆ ನಟಿಸಿದ್ದ ಆರೋಪಿ ಚನ್ನನಾಯ್ಕ್‌ ಬಳಸಿದ್ದ ಕಾರು ಸಾಲು ಮರದ ತಿಮ್ಮಕ್ಕ ಅವರಿಗೆ ಸೇರಿದ್ದು ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ಗೋವಿಂದ ಬಾಬು ಪೂಜಾರಿಯನ್ನು ನಂಬಿಸಲು ಆರೋಪಿಗಳು, ತಿಮ್ಮಕ್ಕ ಅವರ ಸರಕಾರಿ ಕಾರು ದುರ್ಬಳಕೆ ಮಾಡಿಕೊಂಡಿದ್ದರು ಎಂದು ಸಿಸಿಬಿ ಮೂಲಗಳು ಹೇಳಿದ್ದವು.

ಸಾಲುಮರದ ತಿಮ್ಮಕ್ಕ ಕೊಠಡಿ ನವೀಕರಣ ಮಾಡಿದ್ದು ಆರೋಪಿ ಗಗನ್‌ ಕಡೂರು :

ವಂಚನೆ ಪ್ರಕರಣದ ಮತ್ತೊಬ್ಬ ಆರೋಪಿ ಗಗನ್‌ ಕಡೂರು ಮತ್ತು ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್‌ ಆತ್ಮೀಯರಾಗಿದ್ದರು. ವಿಧಾನಸೌಧದಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ನೀಡಲಾಗಿರುವ ಕೊಠಡಿಯ ನವೀಕರಣ ಜವಾಬ್ದಾರಿಯನ್ನು ಗಗನ್‌ ವಹಿಸಿಕೊಂಡಿದ್ದ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದರು. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!