spot_img
Saturday, May 2, 2026
spot_img

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ವಂಚಕರು ಮೋದಿ ಹೆಸರನ್ನೇ ಬಳಸುವುದೇಕೆ? : ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನೆ

ಜನಪ್ರತಿನಿಧಿ ವಾರ್ತೆ : ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಳಿಸಿದ ಸಿಸಿಬಿ ಪೊಲೀಸರು, ಮೂರನೇ ಆರೋಪಿ ಆಗಿರುವ ಅಭಿನವ ಹಾಲಶ್ರೀ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ 1.50 ಕೋಟಿ ಪಡೆದಿರುವ ವಿಚಾರ ಬಯಲಾಗಿದೆ. ಈ ವಿಚಾರವನ್ನು ಉಲ್ಲೇಖಿಸಿ ರಾಜ್ಯ ಕಾಂಗ್ರೆಸ್‌ ಬಿಜೆಪಿಯ ವಿರುದ್ಧ ತನ್ನ ಆಕ್ರೋಶ ಹೊರಹಾಕಿದೆ.

ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ರಾಜ್ಯ ಬಿಜೆಪಿ ಪಕ್ಷದ ವಿರುದ್ಧ ಕಿಡಿ ಕಾರಿದ ಕಾಂಗ್ರೆಸ್‌,  ವಂಚಕರಿಗೆ, ಭ್ರಷ್ಟಾಚಾರಿಗಳಿಗೆ, ಅತ್ಯಾಚಾರಿಗಳಿಗೆ ಮೋದಿ ಹೆಸರೇ ಪ್ರಿಯವಾಗುವುದೇಕೆ? ವಂಚಕರು ಮೋದಿ ಹೆಸರನ್ನೇ ಬಳಸುವುದೇಕೆ? ಫ್ರಿಡಂ 251 ಮೊಬೈಲ್ ವಂಚಕರೂ ಮೋದಿ ಹೆಸರನ್ನೇ ಬಳಸಿ ಟೋಪಿ ಹಾಕಿದ್ದರು. ಟಿಕೆಟ್ ಹಗರಣದ ಸ್ವಾಮಿಯೂ ಮೋದಿ ಹೆಸರನ್ನೇ ಬಳಸಿ ಟೋಪಿ ಹಾಕಿದ್ದಾನೆ. ಮೋದಿ ಹೆಸರು ಎಂದರೆ ವಂಚನೆಗೆ ಸಿಗುವ ಲೈಸೆನ್ಸ್ ಆಗಿದೆಯೆ ಬಿಜೆಪಿ ? ಎಂದು ಪ್ರಶ್ನಿಸಿದೆ.

ಇನ್ನು, ವಂಚನೆ ಪ್ರಕರಣದ ಎ3 ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಅವರನ್ನು ವಿಚಾರಣೆ ನಡೆಸಿದ್ದು, ಸಾಕಷ್ಟು ಮಾಹಿತಿ ಕಲೆಹಾಕಿರುವುದಾಗಿ ವರದಿಯಾಗಿದೆ. ಲಿಖಿತ ಹೇಳಿಕೆಯನ್ನೂ ಕೂಡ ಪಡೆದಿದ್ದು, ಬೆಂಗಳೂರು ಹಾಗೂ ಹಿರೇಹಡಗಲಿಗೆ ಕರೆದುಕೊಂಡು ಹೋಗಿ, ಸ್ಥಳ ಮಹಜರು ಪ್ರಕ್ರಿಯೆಗಳನ್ನೂ ಕೂಡ ಮಾಡಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!