spot_img
Saturday, May 2, 2026
spot_img

ಮೈಸೂರು ದಸರಾ ಅಂದರೆ ಈ ಸರ್ಕಾರ ಮೂಗು ಮುರಿಯುವುದೇಕೆ? : ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ

ಜನಪ್ರತಿನಿಧಿ ವಾರ್ತೆ : ರಾಜ್ಯದಲ್ಲಿ ಬರ ಸ್ಥಿತಿ ಇರುವುದರಿಂದ ಈ ಬಾರಿಯ ಮೈಸೂರು ದಸರಾವನ್ನು ಸರಳವಾಗಿ ಆಚರಿಸುವುದಾಗಿ ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನೀಡಿರುವ ಹೇಳಿಕೆಯನ್ನು ಉಲ್ಲಂಘಿಸಿ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಬಿಜೆಪಿ ಕಾಂಗ್ರೆಸ್‌ ವಿರುದ್ಧ ಆಶ್ರೋಶ ಹೊರಹಾಕಿದೆ.

ಬಿಟ್ಟಿ ಶೋಕಿಗಳಿಗೆ ಕೋಟಿ ಕೋಟಿ ಖರ್ಚು ಮಾಡುವ ಸಿದ್ದರಾಮಯ್ಯ ಅವರ ಸರ್ಕಾರ ಇದೀಗ ಮೈಸೂರು ದಸರಾ ಆಚರಣೆಯನ್ನು ಮಾತ್ರ ಸರಳವಾಗಿ ಆಚರಣೆ ಮಾಡಲು‌ ಮುಂದಾಗಿದೆ. ರಾಜೀವ್ ಗಾಂಧಿ ಪ್ರತಿಮೆ ಮಾಡುವುದಕ್ಕೆ, I.N.D.I.A ಮೈತ್ರಿಕೂಟದ ಸಭೆ ಮಾಡುವುದಕ್ಕೆ, ಅಲ್ಪಸಂಖ್ಯಾತರು, ಮಿಷನರಿಗಳ ಉದ್ಧಾರಕ್ಕಾಗಿ ಕಾಂಗ್ರೆಸ್ ಸರ್ಕಾರದ ಬಳಿ ಕೋಟಿ ಕೋಟಿ ಹಣವಿದೆ. ಆದರೆ ನಾಡ ಹಬ್ಬ ದಸರಾ ಆಚರಿಸಲು, ಕನ್ನಡ ವಿವಿಗಳಿಗೆ ಅನುದಾನ ಕೊಡಲು, ಹಂಪಿ ಉತ್ಸವ ಆಚರಿಸಲು ಮಾತ್ರ ಸರ್ಕಾರಕ್ಕೆ ಬರ, ಅನುದಾನದ ಕೊರತೆ ಅಡ್ಡ ಬರುತ್ತದೆ ಎಂದು ಬಿಜೆಪಿ ಕಿಡಿ ಕಾರಿದೆ.

ಈ ಹಿಂದೆಯೂ ಸಿದ್ದರಾಮಯ್ಯ ಅವರು ದಸರಾ ಆಚರಣೆಗೆ ಹಣವಿಲ್ಲವೆಂದು ಹೇಳಿ, ಅದ್ಧೂರಿಯಾಗಿ ರಾಜ್ಯದ ತುಂಬಾ ಟಿಪ್ಪು ಜಯಂತಿಯನ್ನು ಆಚರಿಸಿದ್ದರು. ಮೈಸೂರು ದಸರಾ ಅಂದರೆ ಈ ಸರ್ಕಾರ ಮೂಗು ಮುರಿಯುವುದೇಕೆ? ಎಂದು ಬಿಜೆಪಿ ಕಾಂಗ್ರೆಸ್‌ ನನ್ನು ಪ್ರಶ್ನಿಸಿದೆ.

ʼರಾಜ್ಯದಲ್ಲಿ ಬರಗಾಲ ಕಾಡುತ್ತಿರುವ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾವನ್ನು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ರೈತಾಪಿ ವರ್ಗವು ಸಂಕಷ್ಟದಲ್ಲಿದೆ. ಹೀಗಾಗಿ ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಎಚ್‌.ಸಿ. ಮಹದೇವಪ್ಪ ಹೇಳಿಕೆ ನೀಡಿದ್ದರು.ʼ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!