spot_img
Saturday, May 2, 2026
spot_img

ಸಾಹಿತಿ ವೈದೇಹಿ ಅವರಿಗೆ ಕಾರ್ಕಡ ‘ಗೆಳೆಯರ ಬಳಗ-ಕಾರಂತ ಪುರಸ್ಕಾರ-2023’

ಕೋಟ: ಗೆಳೆಯರ ಬಳಗ (ರಿ.) ಕಾರ್ಕಡ ಸಾಲಿಗ್ರಾಮ ಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ಗೆಳೆಯರ ಬಳಗ-ಕಾರಂತ ಪುರಸ್ಕಾರ-2023ಕ್ಕೆ ಈ ಬಾರಿ ಕಾರಂತರ ಒಡನಾಡಿ, ಖ್ಯಾತ ಸಾಹಿತಿ, ನಾಡು ನುಡಿ ಏಳಿಗೆಗಾಗಿ ಅನನ್ಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ವೈದೇಹಿ ಭಾಜನರಾಗಿದ್ದಾರೆ.

ಈ ಪುರಸ್ಕಾರವು ಗೌರವಧನ ಹಾಗೂ ಸನ್ಮಾನ ಪತ್ರ, ಫಲಪುಷ್ಪ, ಶಾಲು ಇತ್ಯಾದಿಯಿಂದ ಕೂಡಿರುತ್ತದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2023 ನ್ನು ಅಕ್ಟೋಬರ್ ತಿಂಗಳ 14ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!