Sunday, September 8, 2024

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಶೇ.80ರಷ್ಟು ಆಸ್ತಿ, ಹಣ ಜಪ್ತಿ ಮಾಡಿದ ಸಿಸಿಬಿ ಪೊಲೀಸರು

ಜನಪ್ರತಿನಿಧಿ ವಾರ್ತೆ : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಚೈತ್ರಾ ಕುಂದಾಪುರ ಮತ್ತು ತಂಡವನ್ನು ಸಿಸಿಬಿ ಪೊಲೀಸರು ವಿಚಾರಣೆ ಮಾಡುತ್ತಿದ್ದು, ವಂಚನೆ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಶೇ. 80ರಷ್ಟು ಮೊತ್ತದ ಹಣ, ಆಸ್ತಿ ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೇಟ್‌ ಗೆ ಆಕಾಂಕ್ಷಿಯಾಗಿದ್ದ ಗೋವಿಂದ ಬಾಬು ಪೂಜಾರಿ ವಂಚರಿಕೆ ನೀಡಿದ್ದ ಸುಮಾರು 5 ಕೋಟಿ ರೂಪಾಯಿ ಹಣದಲ್ಲಿ ಶೇ.೮೦ರಷ್ಟನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಎ1 ಆರೋಪಿ ಚೈತ್ರಾ ಕುಂದಾಪುರ ಬಳಿಯಿಂದ 81 ಲಕ್ಷ ನಗದು, 23 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸಹಕಾರಿ ಬ್ಯಾಂಕ್‌ ನಲ್ಲಿ 1.08 ಕೋಟಿ ಮೌಲ್ಯದ ಎಫ್‌ ಡಿ ಜೊತೆಗೆ ಸುಮಾರು 12 ಲಕ್ಷ ಮೌಲ್ಯದ ಕಿಯಾ ಕಾರನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಚೈತ್ರಾ ಕುಂದಾಪುರದ ಗ್ಯಾಂಗ್‌ ನಲ್ಲಿರುವ ಗಗನ್‌ ಕಡೂರು ಹಾಗೂ ಧನರಾಜ್‌ ರಿಂದಲೂ ಕೂಡ 26 ಲಕ್ಷ ಹಣವನ್ನು ವಶ ಪಡಿಸಿಕೊಂಡಿದ್ದಾರೆ. ಇನ್ನು, ಅಭಿನವ ಹಾಲಶ್ರೀ ಸ್ವಾಮೀಜಿಯಿಂದ 56 ಲಕ್ಷ ನಗದು, 25 ಲಕ್ಷ ಮೌಲ್ಯದ ಕಾರನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಉಳಿದ ಹಣದ ಬಗ್ಗೆ ಸಿಸಿಬಿ ತನಿಖೆ ಮುಂದುವರಿಸಿದ್ದು, ಸದ್ಯ, ಚೈತ್ರಾ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 4 ಕೋಟಿಯಷ್ಟು ಹಣವನ್ನು ಜಪ್ತಿ ಮಾಡಿದ್ದಾರೆ.ಈಗಾಗಲೇ ಜಪ್ತಿ ಮಾಡಿದ ಹಣ, ಆಸ್ತಿ, ಆಭರಣಗಳಿಂದ ಪ್ರಕರಣಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!