Thursday, November 21, 2024

ಹೆಬ್ರಿ: ಆಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಹಿಂದಿ ದಿವಸ ಆಚರಣೆ


ಹೆಬ್ರಿ: ಆಮೃತ ಭಾರತಿ ವಿದ್ಯಾ ಕೇಂದ್ರದಲ್ಲಿ ಸೆ.14ರಂದು ಹಿಂದಿ ದಿವಸವನ್ನು ಆಚರಿಸಲಾಯಿತು. ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ದತ್ತಾನಂದ, ಸಂಸ್ಥೆಯ ಪ್ರಾಂಶುಪಾಲರಾದ ಅರುಣ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಭಾರತದಲ್ಲಿ ಅತ್ಯಧಿಕ ಜನರು ಮಾತನಾಡುವುದು ಹಿಂದಿ ಭಾಷೆ. ಭಾಷೆಗಳಲ್ಲಿ ಹಿಂದಿ ಭಾಷೆ ಭಾರತ ಮಾತೆಯ ಸಿಂಧೂರ ಇದ್ದಂತೆ, ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆಯನ್ನಾಗಿ ಮಾಡಲು ಪ್ರತಿಯೊಬ್ಬರೂ ಪಣ ತೊಡಬೇಕಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕೆಂದು ಕಾರ್ಯಕ್ರಮದ ಮುಖ್ಯ ಅತಿಥಿಯಾದ ದತ್ತಾನಂದರವರು ಅಭಿಪ್ರಾಯ ಪಟ್ಟರು.

ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಿತಾ ಪ್ರಾಸ್ತಾವಿಕ ನುಡಿಗಳನ್ನಾಡುತ್ತ ಹಿಂದಿ ಭಾಷೆಯ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು.

ಹಿಂದಿ ಭಾಷಾಭಿಮಾನವನ್ನು ಮಕ್ಕಳಲ್ಲಿ ಬೆಳೆಸುವ ಸಲುವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ,ವಿಜೇತರಾದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಸಂಸ್ಥೆಯ ಎಲ್ಲಾ ಹಿಂದಿ ಶಿಕ್ಷಕರ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ನಡೆಸಿಕೊಟ್ಟರು.ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!