spot_img
Saturday, May 2, 2026
spot_img

‘ಸ್ವಚ್ಛ ಕುಂದಾಪುರ- ನಮ್ಮ ಕುಂದಾಪುರ’ ಬೃಹತ್ ಜನಜಾಗೃತಿ ಅಭಿಯಾನ

ಕುಂದಾಪುರ, ಸೆ.25: ಕುಂದಾಪುರ ಭಂಡಾರ್ಕಾಕಾರ್ಸ್ ಕಾಲೇಜು, ಕುಂದಾಪುರ ಪುರಸಭೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು, ಸೇವಾ ಸಂಸ್ಥೆಗಳ ಸಹಕಾರದಿಂದ ಈ ವರ್ಷ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ ದಿನ ಅಕ್ಟೋಬರ್ 2 ರಂದು, ಅರ್ಥಪೂರ್ಣ ಸಮಾಜ ಮುಖಿಕಾರ್ಯಕ್ರಮ “ಸ್ವಚ್ಛ ಕುಂದಾಪುರ-ನಮ್ಮ ಕುಂದಾಪುರ” ಅಭಿಯಾನ ನಡೆಸಲು ನಿರ್ಧರಿಸಿದೆ ಎಂದು ಕುಂದಾಪುರ ಭಂಡಾರ್ಕಾಸ್ ಕಾಲೇಜು ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ತಿಳಿಸಿದರು.

ಅವರು ಕಾಲೇಜಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ವರ್ಗದವರು ಬೃಹತ್ “ಸ್ವಚ್ಛ ಕುಂದಾಪುರ-ನಮ್ಮ ಕುಂದಾಪುರ” ಎಂಬ ಜನ ಜಾಗೃತಿ ಕಾರ್ಯಕ್ರಮವನ್ನು ಸ್ಥಳೀಯ ಕುಂದಾಪುರದ 23 ವಾರ್ಡ್‍ಗಳಲ್ಲಿ ಹಮ್ಮಿಕೊಂಡಿದ್ದಾರೆ. ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಜನಜಾಗೃತಿ ಕಾರ್ಯಕ್ರಮ ಇದಾಗಿದ್ದು, ಕುಂದಾಪುರ ಪುರಸಭಾ ವ್ಯಾಪ್ತಿಯ ಸುಮಾರು 15000 ಕ್ಕೂ ಮಿಕ್ಕಿ ಮನೆಗಳ ಸಂಪರ್ಕ ಮಾಡುವುದು ಮತ್ತು ಅವರಲ್ಲಿ ಮತ್ತು ಜನರಲ್ಲಿ ಪರಿಸರದ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.

ಈ ಜಾಗೃತಿ ಅಭಿಯಾನದ ಮುಖ್ಯ ಉದ್ದೇಶ ಕುಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಹಸಿ ಮತ್ತು ಒಣ ತ್ಯಾಜ್ಯಗಳ ವಿಲೇವಾರಿ, ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಪರಿಸರ ಮತ್ತು ಜಲ ಸಂರಕ್ಷಣೆಯಾಗಿದೆ. ಸುಸ್ಥಿರ ಬದುಕಿಗೆ ನಮಗೆ ಮತ್ತು ನಮ್ಮ ಮುಂದಿನ ಪೀಳಿಗೆಗೆ ಅತ್ಯಗತ್ಯವಾಗಿರುವ ಉತ್ತಮ ಪರಿಸರವನ್ನು ಉಳಿಸುವ ಕುರಿತು ಜನಜಾಗೃತಿ ಹಾಗೂ ಪರಿಸರ ಮಾಲಿನ್ಯವನ್ನು ತಡೆಯುವುದರ ಕುರಿತು ವಿದ್ಯಾರ್ಥಿಗಳು ವಿವರಿಸಲಿದ್ದಾರೆ.

ಕುಂದಾಪುರದ ಸಹಾಯಕ ಆಯುಕ್ತರು, ಪುರಸಭಾ ಮುಖ್ಯಾಧಿಕಾರಿಗಳು, ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ಪುರಸಭಾ ಸದಸ್ಯರು ಈ “ಸ್ವಚ್ಛ ಕುಂದಾಪುರ-ನಮ್ಮಕುಂದಾಪುರ” ಅಭಿಯಾನಕ್ಕೆ ಉತ್ತಮ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಈಗಾಗಲೇ ಕುಂದಾಪುರ ಪುರಸಭೆ ಪುರ ಸ್ವಚ್ಛತೆ ಕುರಿತು ಉತ್ತಮವಾದ ಸೇವೆ ಸಲ್ಲಿಸುತ್ತಿದ್ದು, ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಪಡೆದಿದೆ. ಈ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದರೊಂದಿಗೆ ಮುಂದಿನ ಪೀಳಿಗೆಗೂ ಪರಿಸರ ಸ್ವಚ್ಛತೆ ಕುರಿತು ಅರಿವು ಮೂಡಿಸುವುದು ಹಾಗೂ ಕುಂದಾಪುರವನ್ನು ಮಾದರಿ ನಗರವಾಗಿ ಬೆಳೆಸುವುದು ಭಂಡಾರ್‍ಕಾರ್ಸ್ ಕಾಲೇಜಿನ ಈ ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.

60 ಸಂವತ್ಸರವನ್ನು ಪೂರೈಸಿ 61ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜು ಸುಮಾರು 3000 ವಿದ್ಯಾರ್ಥಿಗಳಿಗೆ ಈ ಜಾಗೃತಿ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೂ ಅನುವು ಮಾಡಿಕೊಡುತ್ತಿದೆ. ಕಾಲೇಜು ಈ ಹಿಂದೆಯೂ ಇಂತಹ ಸಮಾಜಮುಖಿ ಕಾರ್ಯಕ್ರಮವನ್ನು ಮಾಡಿ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಅಲ್ಲದೇ ಇಂತಹ ಕಾರ್ಯಕ್ರಮವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದರು.

ಸುದ್ಧಿಗೋಷ್ಠಿಯಲ್ಲಿ ಪ.ಪೂ ಕಾಲೇಜು ಪ್ರಾಂಶುಪಾಲರಾದ ಡಾ.ಜಿ.ಎಂ ಗೊಂಡ, ವಿಶ್ವಸ್ಥ ಮಂಡಳಿಯ ಯು.ಎಸ್ ಶೆಣೈ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಸತ್ಯನಾರಾಯಣ, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!