Sunday, September 8, 2024

ಇಂಜಿನಿಯರ್‌ಗಳ ಕರ್ತವ್ಯ ನಿಷ್ಠೆ ಗೌರವಕ್ಕೆ ಅರ್ಹ-ಬಿ.ಸತೀಶ್ ಕಿಣಿ

ಕುಂದಾಪುರ: ನಿಷ್ಠೆ, ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ವಿವಿಧ ಕ್ಷೇತ್ರಗಳ ಪ್ರಗತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬಹು ದೊಡ್ಡ ಕೊಡುಗೆ ನೀಡಿದ ಎಂಜಿನಿಯರ್‌ಗಳು ಗೌರವಕ್ಕೆ ಅರ್ಹರು, ಗ್ರಾಮೀಣ ಭಾಗದಲ್ಲಿ ಹುಟ್ಟಿ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಂಜಿನೀಯರ್ ಪದವಿ ಪಡೆದು ರಾಷ್ಟ್ರೀಯ ಹೆದ್ದಾರಿ ಪ್ರಾಧೀಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾಬಲ ನಾಯ್ಕ ಅಲ್ಬಾಡಿ ಸಾಧನೆ ಇತರರಿಗೆ ಮಾದರಿಯಾಗಿದೆ ಎಂದು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ ಹೇಳಿದರು.

ಅವರು ಬೆಳ್ವೆ ಸಂದೇಶ್ ಕಿಣಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ವತಿಯಿಂದ ಎಂಜಿನಿಯರ್ ಡೇ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧೀಕಾರದಲ್ಲಿ ಎಂಜಿನೀಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾಬಲ ನಾಯ್ಕ ಅಲ್ಬಾಡಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ವೈ ಪಟ್ಟಾಭಿರಾಮ್ ಭಟ್ ಮರೂರು ಮಾತನಾಡಿ,
ಕುಗ್ರಾಮದ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧೀಕಾರದಲ್ಲಿ ಎಂಜಿನೀಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಾಬಲ ನಾಯ್ಕ ಅಲ್ಬಾಡಿ ಇವರು ಶ್ರಮ ಶೃದ್ಧೆ ಸತತ ಪರಿಶ್ರಮದ ಮೂಲಕ ಎಂಜಿನೀಯರ್ ಪದವಿ ಪಡೆದು ರಾಷ್ಟ್ರೀಯ ಹೆದ್ದಾರಿ ಪ್ರಾಧೀಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇವರ ಸಾಧನೆ ಪ್ರಶಂಸನೀಯ, ಇಂತಹವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಆದರ್ಶ ಜೀವನಕ್ಕೆ ಸಾಕ್ಷಿಯಾಗಿದೆ. ತಮ್ಮೂರಿಗೆ ಗೌರವ ತಂದಿರುವ ಇವರು ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಸದಸ್ಯರಾಗಿದ್ದು, ಇವರ ಸಾಧನೆಯನ್ನು ಗುರುತಿಸಿ ಲಯನ್ಸ್ ಕ್ಲಬ್ ವತಿಯಿಂದ ಎಂಜಿನೀಯರ್ ಡೇ ಪ್ರಯುಕ್ತ ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯಾಗಿದೆ ಎಂದರು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಕೋಶಾಧಿಕಾರಿ ಚಂದ್ರಿಕಾ ಬೆಳ್ವೆ, ಉಪಾಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸೂರ್‍ಗೋಳಿ, ನಿಕಟ ಪೂರ್ವಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಮಾಜಿ ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ಶಂಕರ ಶೆಟ್ಟಿ ಬೆಳ್ವೆ, ವಿನೋದ ಕಿಣಿ ಬೆಳ್ವೆ, ಸದಸ್ಯೆ ಶಶಿಕಲಾ ಅಲ್ಸೆ ಸೆಟ್ಟೋಳಿ,ಭಾರ್ಗವಿ ಭಟ್ ಗೋಳಿಯಂಗಡಿ ಹಾಗೂ ಇನ್ನೀತರರು ಉಪಸ್ಥಿತರಿದ್ದರು.

ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ಸ್ವಾಗತಿಸಿದರು. ಸ್ಥಾಪಾಕಧ್ಯಕ್ಷ ಬಿ.ರಾಜೇಂದ್ರ ಕಿಣಿ ಬೆಳ್ವೆ ಪ್ರಾಸ್ತಾವಿಕ ಮಾತನಾಡಿದರು.ತೀರ್ಥಕಲಾ ಕಾರ್ಯಕ್ರಮ ನಿರೂಪಿಸಿದರು. ಉದಯ ಜೋಗಿ ಗೋಳಿಯಂಗಡಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!