spot_img
Monday, March 30, 2026
spot_img

ನಡು ಬೀದಿಯಲ್ಲಿ ಅತ್ಯಾಚಾರ ಸಂತ್ರಸ್ತೆ ನರಳಾಟ : ಬಿಜೆಪಿ ವಿರುದ್ಧ ಪ್ರಿಯಾಂಕ ಗಾಂಧಿ ತರಾಟೆ

ಜನಪ್ರತಿನಿಧಿ ವಾರ್ತೆ : ಮಧ್ಯಪ್ರದೇಶದ ಉಜ್ಜಯಿನಿಯ ನಗರದ ಬೀದಿಯಲ್ಲಿ ನಡೆದ ಅತ್ಯಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅಲ್ಲಿನ ಬಿಜೆಪಿ ಸರ್ಕಾರದ ವಿರುದ್ಧ ತರಾಟೆ ತೆಗೆದುಕೊಂಡಿದ್ದಾರೆ.

೧೨ ವರ್ಷದ ಬಾಲಕಿಯೋರ್ವಳು ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಆಡಳಿತ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಅವರು, ಬಿಜೆಪಿ ಸರ್ಕಾರದ ದುರಾಡಳಿತದಲ್ಲಿ ಬಾಲಕಿಯರು, ಮಹಿಳೆಯರು, ದಲಿತರು, ಆದಿವಾಸಿಗಳು ಸುರಕ್ಷಿತವಾಗಿ ಇರುವುದಕ್ಕೆ ಸಾಧ್ಯವಿಲ್ಲ. ಭಗವಾನ್‌ ಮಹಾಕಾಳನ ನಗರದಲ್ಲಿ ನಡೆದ ಈ ಪುಟ್ಟ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣವು ಮನಸ್ಸನ್ನು ಘಾಸಿಗೊಳಿಸಿದೆ. ಚಿತ್ರಹಿಂಸೆ ತಡೆಯಲಾಗಿದೆ ಸಂತ್ರಸ್ತ ಬಾಲಕಿ ಮನೆಯಿಂದ ಮನೆಗೆ ಸುಮಾರು ಎರಡುವರೆ ಗಂಟೆ ಅಲೆದಾಡಿದ ಬಳಿಕ ಪ್ರಜ್ಙಾಹೀನವಾಗಿ ಬಿದ್ದರೂ ಆಕೆಗೆ ಯಾವದೇ ಸಹಾಯ ಸಿಕ್ಕಿರಲಿಲ್ಲ ಎಂದು ವಿಷಾದ ವ್ಯಕ್ತ ಪಡಿಸಿದ್ದಾರೆ.

ಇಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಸಿಗದಿದ್ದ ಮೇಲೆ ʼಲಾಡ್ಲಿ ಬೆಹನಾʼ ಹೆಸರಿನಲ್ಲಿ ಚುನಾವಣಾ ಘೋಷಣೆ ಮಾಡಿ ಯಾವ ಪ್ರಯೋಜನವಿದೆ. ಇದು ಮಧ್ಯಪ್ರದೇಶದ ಕಾನೂನು ಮತ್ತು ಸುವ್ಯಸ್ಥೆಯೇ ? ಬಿಜೆಪಿಯ ೨೦ ವರ್ಷಗಳ ದುರಾಡಳಿತದಲ್ಲಿ ಹೆಣ್ಣುಮಕ್ಕಳು, ಮಹಿಳೆಯರು, ಆದಿವಾಸಿಗಳು ಮತ್ತು ದಲಿತರಿಗೆ ರಕ್ಷಣೆ ಇಲ್ಲ ಎಂದು ಅವರು ಕಿಡಿ ಕಾರಿದ್ದಾರೆ.

ಉಜ್ಜಯಿನಿಯ ನಗರದ ರಸ್ತೆಯೊಂದರಲ್ಲಿ ಬುಧವಾರ (ಸೆ.೨೭) ೧೨ ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ರಕ್ತಸ್ರಾವದಿಂದ ನರಳಿದ ಘಟನೆ ನಡೆದಿತ್ತು. ಬಾಲಕಿಯನ್ನು ತರುವಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಙ ವೈದ್ಯರ ತಂಡ ಬಾಲಕಿಯನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿದರು. ಆದರೂ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ನಂತರ ಮಧ್ಯಪ್ರದೇಶದ ಆಡಳಿತ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್‌, ಆಡಳಿತ ಸರ್ಕಾರ ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವುದರಲ್ಲಿ ಅಸಮರ್ಥವಾಗಿದೆ ಎಂದು ಟೀಕಿಸಿದೆ.

 ಇನ್ನು, ಈ ಬಗ್ಗೆ ಪ್ರತಿಕ್ರಯಿಸಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಹಾಗೂ ಸಂಸದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಚುನಾವಣಾ ಪ್ರಚಾರದಿಂದ ಸ್ವಲ್ಪ ಬಿಡುವು ಮಾಡಿಕೊಂಡರೆ ಮಾತ್ರ ಮಹಿಳೆಯರ ಕೂಗು ಕೇಳಿಸುತ್ತದೆ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!