spot_img
Sunday, March 29, 2026
spot_img

ಹೊಸ ವೈದ್ಯಕೀಯ ಕಾಲೇಜಿಗೆ ಕೇಂದ್ರ ತಡೆ : ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಅನ್ಯಾಯ : ಕಾಂಗ್ರೆಸ್‌ ಆಕ್ರೋಶ

ಜನಪ್ರತಿನಿಧಿ ವಾರ್ತೆ :  ಕರ್ನಾಟಕವೂ ಸೇರಿ ದಕ್ಷಿಣ ಭಾರತದಲ್ಲಿ ಸದ್ಯಕ್ಕೆ ಹೊಸ ವೈದ್ಯ ಕಾಲೇಜು ತೆರೆಯಲು ಅಥವಾ ಈಗಿರುವ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಿಲ್ಲದಂತೆ ಮಾಡುವ ನೂತನ ನಿಯಮವೊಂದನ್ನು ಕೇಂದ್ರ ಸರ್ಕಾರ ತಂದಿರುವುದರ ಬಗ್ಗೆ ಪ್ರಶ್ನಿಸಿ ರಾಜ್ಯ ಕಾಂಗ್ರೆಸ್‌ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದೆ.

ವೈದ್ಯಕೀಯ ಶಿಕ್ಷಣದಲ್ಲಿ ಕರ್ನಾಟಕ ದೇಶದಲ್ಲೇ ಸಿಂಹಪಾಲನ್ನು ಹೊಂದಿದೆ, ಇದನ್ನು ದಕ್ಷಿಣ ಭಾರತ ಅದರಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗುವಂತೆ ನಿಯಮ ಜಾರಿಗೊಳಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ ಮುಂದಾಗಿದೆ. ಇದರಿಂದ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಅನ್ಯಾಯವಾಗಿದೆ. ವೈದ್ಯಕೀಯ ಶಿಕ್ಷಣದ ಸೀಟುಗಳನ್ನು ಹೆಚ್ಚಿಸದಂತೆ, ಹೊಸ ವೈದ್ಯಕೀಯ ಕಾಲೇಜು ತೆರೆಯದಂತೆ ಈ ನಿಯಮ ತಡೆಯಲಿದೆ ಎಂದು ಕೇಂದ್ರ ಸರ್ಕಾರವನ್ನು ರಾಜ್ಯ ಕಾಂಗ್ರೆಸ್‌ ಜರೆದಿದೆ.

ಇನ್ನು ರಾಜ್ಯ ಬಿಜೆಪಿಯ ಸಂಸದರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್‌, ಕರ್ನಾಟಕದ ಮೇಲೆ ನಿರಂತರವಾಗಿ ಪ್ರತಿ ವಿಷಯದಲ್ಲೂ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದ್ದರೂ ಬಿಜೆಪಿಯ 25 ಸಂಸದರು ತುಟಿ ಬಿಚ್ಚದಿರುವುದೇಕೆ? ರಾಜ್ಯದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿಯೇ ಮುಖ್ಯವಾಯ್ತೆ? ಎಂದು ಪ್ರಶ್ನೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!