Sunday, September 8, 2024

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ : 40.99 ಲಕ್ಷ ರೂ ಲಾಭ | ಶೇ.10 ಡಿವಿಡೆಂಡ್ ಘೋಷಣೆ


ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಎಲ್ಲಾ ಸದಸ್ಯರಿಗೆ ಸಾರ್ಥಕ ಸೇವೆಯನ್ನು ನೀಡುತ್ತಿದೆ. ಸದಸ್ಯರ ಹೆಚ್ಚಿನ ಪ್ರೋತ್ಸಾಹದಿಂದ ಬ್ಯಾಂಕು ಪ್ರತಿವರ್ಷ ಠೇವಣಿ ಸಂಗ್ರಹಣೆ ಮತ್ತು ಸಾಲ ವಸೂಲಾತಿಯಲ್ಲಿ ಗುರಿ ಸಾಧಿಸುತ್ತಿದೆ. ಬ್ಯಾಂಕು 2022-23ನೇ ಸಾಲಿನಲ್ಲಿ 114 ಕೋಟಿ ರೂ.ಗೂ ಮಿಕ್ಕಿ ವ್ಯವಹಾರ ನಡೆಸಿದ್ದು, 40.99 ಲಕ್ಷ ರೂ. ನಿವ್ವಳ ಲಾಭ ಹೊಂದಿ ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಹೇಳಿದರು.

ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ಶುಕ್ರವಾರ ನಡೆದ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಗೋಪಾಲ ಜಿ.ನಾಯ್ಕ್, ಶ್ರೀನಿವಾಸ ಜತ್ತನ್, ಸುಭಾಶ್ಚಂದ್ರ ಪೂಜಾರಿ, ಚಂದ್ರಶೇಖರ ಪೂಜಾರಿ, ಚಂದ್ರಮತಿ ಹೆಗ್ಡೆ, ಪ್ರೇಮಾ ಸಿ.ಪೂಜಾರಿ, ಯಮುನಾ, ನಾಗರಾಜ ಎಂ. ಮತ್ತು ಲಕ್ಷ್ಮಣ ಉಪಸ್ಥಿತರಿದ್ದರು. ಬ್ಯಾಂಕಿನ ಕಾರ್ಯವ್ಯಾಪ್ತಿಯಲ್ಲಿರುವ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ 26 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ವರದಿ ವಾಚಿಸಿದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!