spot_img
Saturday, March 28, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜು ಎನ್.ಎಸ್.ಎಸ್ ಘಟಕದಿಂದ ‘ಸ್ವಚ್ಛ ಸಾಮ್ರಾಜ್ಯ’ ಯಕ್ಷಗಾನ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದಡಿಯಲ್ಲಿ ಪರಿಸರ ಕುರಿತು ಜಾಗೃತಿ ಮೂಡಿಸುವ ಸ್ವಚ್ಛ ಸಾಮ್ರಾಜ್ಯ ಎನ್ನುವ ಯಕ್ಷಗಾನವನ್ನು ಪ್ರದರ್ಶಿಸಿದರು.

ಹಸಿಕಸ, ಒಣಕಸ, ಇನ್ನಿತರ ಕಸಗಳ ಉಲ್ಲೇಖದೊಂದಿಗೆ ಇವುಗಳ ಸಮರ್ಪಕ ವಿಲೇವಾರಿಯ ಕುರಿತು ಕಥಾ ಸಂಭಾಷಣೆ ಒಳಗೊಂಡ ಪ್ರಸಂಗ, ಕಸಾಸುರನ ವಧೆಯೊಂದಿಗೆ ಮುಕ್ತಾಯಗೊಂಡಿತು. ಈ ಯಕ್ಷಗಾನ ಪ್ರಸಂಗವನ್ನು ಸುಶ್ಮಿತಾ ಸಾಲಿಗ್ರಾಮ ರಚಿಸಿ, ನಿರ್ದೇಶಿಸಿದ್ದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಐಕ್ಯೂ‌ಎಸಿ ಸಂಯೋಜಕಿ ದೀಪಿಕಾ ಜಿ., ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!