spot_img
Wednesday, January 22, 2025
spot_img

ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ : ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪೋಸ್ಟ್ ಮ್ಯಾಟ್ರಿಕ್ ಮತ್ತು ಪ್ರೀ ಮ್ಯಾಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

1 ರಿಂದ 10 ನೇ ತರಗತಿ ವರೆಗಿನ ವಿಕಲಚೇತನ ವಿದ್ಯಾರ್ಥಿಗಳು ಹೊಸ ಅರ್ಜಿಯನ್ನುhttps://ssp.karnataka.gov.in/ssp2324/homenew.aspx ಮೂಲಕ ಹಾಗೂ ನವೀಕರಣ ಅರ್ಜಿಯನ್ನು https://ssp.karnataka.gov.in/ssp2324/signin.aspx ಮೂಲಕ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀಣ ರಜತಾದ್ರಿ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!