spot_img
Saturday, March 28, 2026
spot_img

ರಾಷ್ಟ್ರೀಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಕಾಲೇಜಿನ ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ಆಯ್ಕೆ

ಜನಪ್ರತಿನಿಧಿ ವಾರ್ತೆ (ಹೆಮ್ಮಾಡಿ) : ಪಂಜಾಬ್ ರಾಜ್ಯದ ಲುಧಿಯಾನದ ಶ್ರೀ ಬೈನಿ ಸಾಹಿಬ್ ಗುರುದ್ವಾರ ನಡೆಸುವ ಸದ್ಗುರು ಜಗಜೀತ್ ಸಿಂಗ್ ರಾಷ್ಟ್ರೀಯ ಮಟ್ಟದ ಹಿಂದುಸ್ಥಾನಿ ಖಯಾಲ್ ಗಾಯಕ ಕಿರಿಯರ ವಿಭಾಗದ ಆನ್ ಲೈನ್ ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ  ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ಪ್ರಥಮ ಸುತ್ತಿನಲ್ಲಿ ತೇರ್ಗಡೆಯಾಗಿ ದ್ವಿತೀಯ ಸುತ್ತಿನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ವಿದ್ಯಾರ್ಥಿಯೊಬ್ಬ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವುದು ಸಂಸ್ಥೆಗೂ ಹೆಮ್ಮೆ. ಕೇದಾರ್‌ ಮರವಂತೆ ಕಲಿಕೆಯ ಜೊತೆಗೆ ಸಂಗೀತದಲ್ಲಿಯೂ ಅಪಾರವಾದ ಆಸಕ್ತಿ ಹೊಂದಿದವನಾಗಿದ್ದಾನೆ. ಅಂತಿಮ ಸುತ್ತಿಗೆ ತಲುಪಿ, ಸ್ಪರ್ಧೆಯಲ್ಲಿ ಗೆದ್ದು ಕಾಲೇಜಿನಗೆ ಕೀರ್ತಿ ತರುವಂತಾಗಲಿ ಎಂದು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

ದ್ವಿತೀಯ ಸುತ್ತಿನ ಸ್ಪರ್ಧೆಯು ಮಹಾರಾಷ್ಟ್ರದ ಪುಣೆಯಲ್ಲಿ ಮುಂಬರುವ ನವೆಂಬರ್ 4 ಮತ್ತು 5 ರಂದು ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!