spot_img
Saturday, March 28, 2026
spot_img

ಬ್ಲಾಕ್ ಕಾಂಗ್ರೆಸ್  ಕುಂದಾಪುರ ಕಛೇರಿಯಲ್ಲಿ ಗಾಂಧಿ ಜಯಂತಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

ಜನಪ್ರತಿನಿಧಿ ವಾರ್ತೆ : ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ಹಿರಿಯ ಮುಖಂಡರಾದ ಶೇಖರ ಚಾತ್ರಬೆಟ್ಟು  ಮಾತನಾಡಿ, “ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಗಾಂಧೀಜಿಯವರ ಅಹಿಂಸಾ ಮಾರ್ಗವು ಮಹತ್ತರ ಪಾತ್ರ ವಹಿಸಿತ್ತು. ಮಹಾನ್ ನಾಯಕರೆಲ್ಲ ಗಾಂಧೀಜಿಯವರ ತತ್ವ ಸಿದ್ಧಾಂತಗಳನ್ನು ಅನುಸರಿಸಿಕೊಂಡಿದ್ದಾರೆ. ನಾವೆಲ್ಲರೂ ಗಾಂಧಿ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಸಿ ಹೋಗಬೇಕು ಎಂದು ಹೇಳಿದರು.

ನ್ಯಾಯವಾದಿಗಳಾದ ಸಚ್ಚಿದಾನಂದ ಎಂ. ಎಲ್ ಗಾಂಧೀಜಿಯವರ ತತ್ವ, ಆದರ್ಶದ ಕುರಿತು ಮಾತನಾಡಿದರು.

ಇಂಟೆಕ್ ಅಧ್ಯಕ್ಷರಾದ ಚಂದ್ರ ಅಮೀನ್, ಅಭಿಜಿತ್ ಪೂಜಾರಿ  ,ಎನ್ ಎಸ್ ಯು ಐ ಅಧ್ಯಕ್ಷ ಸುಜನ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಜಾನಕಿ ಬಿಲ್ಲವ, ಕೇಶವ್ ಭಟ್,ಸುನಿಲ್ ಪೂಜಾರಿ, ಜೋಸೆಫ್ ರೆಬೆಲ್ಲೊ, ಸುಶಾಂತ್, ಎಡಾಲ್ಫ್ ಡಿಕೋಸ್ತಾ, ಫ್ರಾನ್ಸಿಸ್ ಮಚಾದೊ, ಜ್ಯೋತಿ ಡಿ ನಾಯ್ಕ್, ದಿನೇಶ, ಪ್ರೀತಮ್ ಕರ್ವಾಲ್ಲೊ, ಕೆ. ಶಿವಕುಮಾರ್, ಶಶಿರಾಜ್ ಪೂಜಾರಿ, ಕೆ. ಪಿ. ಅರುಣ್, ಮೇಬಲ್ ಡಿಸೋಜ, ಸಂತೋಷ್, ಸದಾನಂದ ಖಾರ್ವಿ ಉಪಸ್ಥಿತರಿದ್ದರು.

ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ ಸ್ವಾಗತಿಸಿ ಅಶೋಕ ಸುವರ್ಣ ವಂದಿಸಿದರು.ಕಾರ್ಯದರ್ಶಿ ಆಶಾ ಕರ್ವಾಲ್ಲೊ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!