Sunday, September 8, 2024

ಹಿರಿಯ ನಟ ದೊಡ್ಡಣ್ಣ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ


ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ನವೆಂಬರ್ ತಿಂಗಳಲ್ಲಿ ನಡೆಯುವ ಸದ್ಭಾವನಾ -2023 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು ಈ ಬಾರಿ ನವೆಂಬರ್ 10 ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸುತ್ತಿದೆ.

ಪ್ರತಿವರ್ಷ ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದು ಈ ಬಾರಿ ಕನ್ನಡ ಚಿತ್ರರಂಗದ ಶ್ರೇಷ್ಠ ನಟ ದೊಡ್ಡಣ ರವರಿಗೆ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದೆ. ಪ್ರಶಸ್ತಿ 15ಸಾವಿರ ಮೌಲ್ಯದ ಬೆಳ್ಳಿ ಸ್ಮರಣಿಗೆ ನಗದು ಒಳಗೊಂಡಿದೆ.

ಇದೇ ವೇಳೆ ವಿಶೇಷ ಅಭಿನಂದನೆಯನ್ನು ಅಮ್ಮಚ್ಚಿ ಎಂಬ ನೆನಪು ಚಿತ್ರದ ನಾಯಕ ರಂಗನಟ ಡಾ.ರಾಧಕೃಷ್ಣ ಉರಾಳ ಇವರಿಗೆ ನೀಡಲಿದ್ದು ,ವಿಶೇಷ ಪುರಸ್ಕಾರವನ್ನು ಪರಿಸರಸ್ನೇಹಿ ಸಂಘಟನೆ ಕ್ಲಿನ್ ತ್ರಾಸಿ ತಂಡಕ್ಕೆ ನೀಡಲಿದೆ.ಪ್ರತಿಭಾ ಪುರಸ್ಕಾರ,ಅಶಕ್ತರಿಗೆ,ಅನಾರೋಗ್ಯ ಪೀಡಿತರಿಗೆ ,ವಿದ್ಯಾರ್ಥಿವೇತನ,ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ ,ಕನ್ನಡ ಮಾಧ್ಯಮ ಸರಕಾರಿ ಶಾಲೆಗಳಿಗೆ ದತ್ತಿನಿಧಿ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಈ ವೇದಿಕೆಯಲ್ಲಿ ನೀಡಲಿದೆ.ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಪುಟಾಣಿಗಳಿಂದ ನೃತ್ಯ,ಮಂಗಳೂರು ಪ್ರಸಿದ್ಧ ನಾಟಕ ತಂಡ ದೇವದಾಸ್ ಕಾಪಿಕಾಡ್ ನಿರ್ದೇಶನದ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!