spot_img
Saturday, March 28, 2026
spot_img

ಆನಗಳ್ಳಿ ಶಾಲೆಯಲ್ಲಿ ವಿವೇಕ ತರಗತಿ ಕೋಣೆಗಳ ಉದ್ಘಾಟನೆ

ಕುಂದಾಪುರ: ಆನಗಳ್ಳಿಯಲ್ಲಿ ಸ.ಹಿ.ಪ್ರಾ.ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನಾ ಸಮಾರಂಭ ನೆರವೇರಿತು.

ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಆನಗಳ್ಳಿ ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು. ಇದೀಗ ಅವರ ಕನಸಿನಂತೆ ಶಾಲೆಯ ನೂತನ ವಿವೇಕ ತರಗತಿ ಕೋಣೆಗಳ ಉದ್ಘಾಟನೆಗೊಂಡಿದೆ. ಸಮಾಜದ ಭವಿಷ್ಯ ರೂಪಿಸುವ ಮಕ್ಕಳು ಶೈಕ್ಷಣಿಕವಾಗಿ ಬೆಳೆಯಬೇಕು.ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸುರೇಶ್ ಬಿಲ್ಲವ, ಶಾಲಾ ಮುಖ್ಯೋಪಾಧ್ಯಾಯಿನಿ ರೇಷ್ಮಾ ಗಿರೀಶ್ ಗಾಣಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಕುಂದಾಪುರ ವಲಯ ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಲಿಂಗಪ್ಪ ಮೇಷ್ಟ್ರು, ಶಂಕಯ್ಯ ಮೇಷ್ಟ್ರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಆನಗಳ್ಳಿ ಗ್ರಾಮ ಪಂಚಾಯಿತಿನ ಸದಸ್ಯರಾದ ಸುರೇಶ್ ಆರ್ ನಾಯ್ಕ್, ನಿರ್ಮಲ ಹೇರಿಕುದ್ರು, ಮೂಕಾಂಬು ಆನಗಳ್ಳಿ, ಪ್ರಮುಖರಾದ ಭಾಸ್ಕರ್ ಬಿಲ್ಲವ ಹೇರಿಕುದ್ರು, ಸುನಿಲ್ ಶೆಟ್ಟಿ, ಸುಧಿರ್ ಕೆ.ಎಸ್, ಗೋಪಾಲ ಕಳಂಜಿ, ಗೋಡ್ವಿನ್ ಆನಗಳ್ಳಿ, ರಾಘವೇಂದ್ರ ಗಾಣಿಗ, ಶರತ್ ಆನಗಳ್ಳಿ, ಜೋಸೆಫ್ ರೆಬೆಲ್ಲೊ ಆನಗಳ್ಳಿ ಹಾಗೂ ಶಾಲಾ ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮಕ್ಕಳ ಪೋಷಕರು, ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!