spot_img
Wednesday, January 22, 2025
spot_img

ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ: ರಾಜ್ಯ ಸರ್ಕಾರಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿದೆ-ಶಾಸಕ ಗುರುರಾಜ ಗಂಟಿಹೊಳೆ

ಗಂಗೊಳ್ಳಿ : ಗಂಗೊಳ್ಳಿ-ಕುಂದಾಪುರ ನಡುವೆ ಪಂಚಗಂಗಾವಳಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಅನೇಕ ವರ್ಷಗಳಿಂದ ಕೇಳಿ ಬರುತ್ತಿದೆ. ಗಂಗೊಳ್ಳಿ ಜನರು ಪಕ್ಷಾತೀತವಾಗಿ, ಒಗ್ಗಟ್ಟಿನಿಂದ ಸೇತುವೆ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿರುವುದರಿಂದ ಸರಕಾರದ ಮೇಲೆ ಒತ್ತಡ ಇನ್ನಷ್ಟು ಹೆಚ್ಚಾಗುತ್ತದೆ. ಕೇಂದ್ರ ಸರಕಾರ ಸೇತುವೆ ನಿರ್ಮಾಣದ ಬಗ್ಗೆ ಆಸಕ್ತಿ ತೋರಿಸಿದ್ದು, ರಾಜ್ಯ ಸರಕಾರದಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದರೆ ಸೇತುವೆ ನಿರ್ಮಾಣ ಕನಸು ನನಸಾಗುವ ಸಾಧ್ಯತೆ ಇದೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ, ಪಿಡಬ್ಲ್ಯುಡಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಮೀನುಗಾರಿಕೆ ಇಲಾಖೆ ಸಚಿವರು, ಸಂಸದರನ್ನು ಹೋರಾಟ ಸಮಿತಿ ನಿಯೋಗದೊಂದಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗವುದು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಗಂಗೊಳ್ಳಿ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಸೇತುವೆ ಹೋರಾಟ ಸಮಿತಿ ವತಿಯಿಂದ ಭಾನುವಾರ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

ಗಂಗೊಳ್ಳಿ-ಕುಂದಾಪುರ ನಡುವೆ ಸೇತುವೆ ನಿರ್ಮಾಣವಾದರೆ ಮೀನುಗಾರರು ಹಾಗೂ ಮೀನುಗಾರಿಕೆ ಬಹಳಷ್ಟು ಅನುಕೂಲವಾಗಲಿದೆ ಅಲ್ಲದೆ ಗಂಗೊಳ್ಳಿ ಮತ್ತು ಸುತ್ತಮುತ್ತಲಿನ ಅನೇಕ ಗ್ರಾಮಗಳ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಗಂಗೊಳ್ಳಿ ಬಂದರಿನ ಜೆಟ್ಟಿ ಪುನರ್ ನಿರ್ಮಾಣ ಕಾಮಗಾರಿ, ಹೂಳೆತ್ತುವ ಕೆಲಸ ಸಹಿತ ಅನೇಕ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದೆ. ಈ ಬಗ್ಗೆ ಮತ್ತೊಮ್ಮೆ ಸರಕಾರದ ಗಮನ ಸೆಳೆದು ಕಾಮಗಾರಿಗಳ ಪುನರಾರಂಭಕ್ಕೆ ಪ್ರಯತ್ನಿಸಲಾಗುವುದು ಎಂದರು.

ಸೇತುವೆ ನಿರ್ಮಾಣ ಹೋರಾಟ ಸಮಿತಿ ಅಧ್ಯಕ್ಷ ಉಮಾನಾಥ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಎಂ.ಜಿ.ನಾಗಪ್ರಸಾದ ಪೈ, ರಾಘವೇಂದ್ರ ಗಾಣಿಗ, ಸಮಿತಿ ಖಜಾಂಚಿ ಸದಾಶಿವ ಖಾರ್ವಿ ಕಂಚುಗೋಡು, ಶ್ರೀಪತಿ ಗಂಗೊಳ್ಳಿ ಮೊದಲಾದವರು ಸಲಹೆ ಸೂಚನೆ ನೀಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ದೇವಸ್ಥಾನದ ಪ್ರಧಾನ ಅರ್ಚಕ ರವೀಶ್ ಭಟ್, ಗ್ರಾಪಂ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮೊದಲಾದವರು ಉಪಸ್ಥಿತರಿದ್ದರು.

ಸಮಿತಿ ಸದಸ್ಯ ಬಿ.ರಾಘವೇಂದ್ರ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ನವೀನ್ ಗಂಗೊಳ್ಳಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!