spot_img
Friday, March 27, 2026
spot_img

ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಲತಾ ಅವರಿಗೆ ಬೀಳ್ಕೊಡುಗೆ

 ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಖಂಬದಕೋಣೆಯಲ್ಲಿ ಸುದೀರ್ಘ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡಿರುವ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಲತಾ ಇವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಗಾಂಧೀಜಿ  ಹಾಗೂ ಶಾಸ್ತ್ರೀಜಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಎಸ್. ಡಿ. ಎಮ್. ಸಿ ಅಧ್ಯಕ್ಷೆ ರಾಧಾರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಲಾ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ, ಹಾಗೂ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕಿಯು ಶಾಲೆಯಲ್ಲಿ ಸಲ್ಲಿಸಿದ ಕರ್ತವ್ಯವನ್ನು ಎಲ್ಲರೂ ಕೊಂಡಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗಮ್ಮ ದೇವಾಡಿಗ ಇವರು  ಶಾಲು ಹೊದಿಸಿ,ಸ್ಮರಣಿಕೆ ಹಾಗೂ ಫಲಪುಷ್ಪ ನೀಡಿ ಗೌರವಿಸಿದರು.ಪಂಚಾಯತ್ ಉಪಾಧ್ಯಕ್ಷರಾದ ಗಣೇಶ ದೇವಾಡಿಗ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ಕುಮಾರ್ ದೇವಾಡಿಗ, ಕದಂಬ ಯುವಕ ಮಂಡಲದ ಗೌರವ ಅಧ್ಯಕ್ಷರಾದ ಸಂತೋಷ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪುಷ್ಪಲತಾ ಇವರು ಶಾಲೆಯೊಂದು ಕಲರ್ ಪ್ರಿಂಟರ್ ಕೊಡುಗೆ ಯಾಗಿ ನೀಡಿದರು. ಶಿಕ್ಷಕಿಯರಾದ ಸರಸ್ವತಿ, ಪದ್ಮಾವತಿ, ಪಲ್ಲವಿ, ಆಶಿಕಾ , ಸುಶ್ಮಿತಾ ಹಾಗೂ ಎಸ್. ಡಿ.ಎಮ್.ಸಿ ಸದಸ್ಯರು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. 

  ಮುಖ್ಯ ಶಿಕ್ಷಕ ಮಹಾಬಲ.ಕೆ ಸ್ವಾಗತಿಸಿದರು, ಶಿಕ್ಷಕರಾದ ನಾಗ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ನಾಗರತ್ನ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!