Sunday, September 8, 2024

ಕುಂಭಾಶಿ ಅಂಗನವಾಡಿ ಸಭಾಭವನ ಉದ್ಘಾಟನೆ

ಕುಂದಾಪುರ: ಅಂಗನವಾಡಿ ಕಟ್ಟಡ ನಿರ್ಮಾಣ ಸಮಿತಿ ಕುಂಭಾಶಿ, ಗ್ರಾಮ ಪಂಚಾಯತ್ ಕುಂಭಾಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಇವರ ಜಂಟಿ ಆಶ್ರಯದಲ್ಲಿ ಕುಂಭಾಶಿ ಅಂಗನವಾಡಿ ಸಭಾಭವನ ಉದ್ಘಾಟನೆ ಕಾರ್ಯಕ್ರಮ ಜರಗಿತು.

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಅಂಗನವಾಡಿ ಕಟ್ಟಡ ಉದ್ಘಾಟನೆ ಮಾಡಿದರು.

ಸಭಾ ಭವನವನ್ನು ಉದ್ಘಾಟನೆ ನೆರವೇರಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು, ಮಕ್ಕಳಲ್ಲಿ ಮಾನವೀಯ ಬಾಂಧವ್ಯ ವೃದ್ಧಿಸಲು ಅಂಗನವಾಡಿ ಕೇಂದ್ರಗಳು ಪೂರಕವಾಗಲಿದೆ.ಇಂದಿನ ಈ ಕಾಲಘಟ್ಟದಲ್ಲಿ ಮಕ್ಕಳು ಮಾನವೀಯ ಬಾಂಧವ್ಯವನ್ನು ಕಡಿಮೆಗೊಳಿಸುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳು ಎಚ್ಚೆತ್ತುಕೊಂಡು ಗುಣಾತ್ಮಕ ಸಂಸ್ಕಾರಗಳನ್ನು ಕಲಿಸುವ ಕೇಂದ್ರಗಳಾಗಿ ಭವಿಷ್ಯದ ದಿನದಲ್ಲಿ ಅಂಗನವಾಡಿ ಕೇಂದ್ರಗಳು ಸಮಾಜವನ್ನು ಗಟ್ಟಿಗೊಳಿಸುವ ಮಕ್ಕಳನ್ನು ರೂಪಿಸುವ ಕೇಂದ್ರಗಳಾಗಿ ಮೂಡಿಬರಲಿ ಎಂದು ಶುಭ ಹಾರೈಸಿದರು,

ಕುಂಭಾಶಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಆನಂದ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಅಂಗನವಾಡಿಯ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರು ಮತ್ತು ನೇತೃತ್ವ ವಹಿಸಿದ ಶ್ರೀಮತಿ ರಾಧಾದಾಸ್ ಕುಂಭಾಶಿ ಇವರನ್ನು ಅಭಿನಂದಿಸಲಾಯಿತು ಹಾಗೂಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರವಾಡಿ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಾಧಾದಾಸ್, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿಗಳಾದ ರಮಣ ಉಪಾಧ್ಯಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಕ್ವಾಲಿಟಿ ಕಾರ್ಪೊರೇಟ್ ಮಣಿಪಾಲ ಟೆಕ್ನಾಲಜಿ ಇದರ ಮುಖ್ಯಸ್ಥರಾದ ಶ್ರೀನಿವಾಸ್ ರಾವ್, ಶ್ರೀ ಕ್ಷೇತ್ರ ಧ.ಗ್ರಾ,ಯೋಜನೆ ಉಡುಪಿ ಇದರ ನಿರ್ದೇಶಕ ಶಿವರಾಯ ಪ್ರಭು,, ಕುಂದಾಪುರ ರೂರಲ್ ಆಯುರ್ವೇದ ಮೆಡಿಕಲ್ ಕಾಲೇಜು ಮುಖ್ಯಸ್ಥ ಡಾ| ಪ್ರಸನ್ನ ಐತಾಳ್, ಅಂಗನವಾಡಿ ಕಟ್ಟಡ ನಿರ್ಮಾಣ ಸಮಿತಿ ಕೋಶಾಧಿಕಾರಿ, ಇಂಜಿನಿಯರ್ ಶ್ರೀನಿಧಿ ಉಪಾಧ್ಯ, ಪತ್ರಕರ್ತ ಯು.ಎಸ್ ಶೆಣೈ, ಉದ್ಯಮಿ ಮಂಜುನಾಥ್ ಕಾಮತ್ ಕುಂಭಾಶಿ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಜಯರಾಮ್ ಶೆಟ್ಟಿ ಉಪಸ್ಥಿತರಿದ್ದರು,

ಇದೇ ಸಂದರ್ಭದಲ್ಲಿ ನ್ಯಾಯವಾದಿ ರವಿಕಿರಣ ಮುರುಡೇಶ್ವರ, ಗ್ರಾಮ ಪಂಚಾಯಿತಿ ಸದಸ್ಯೆ ಶ್ವೇತಾ ಶ್ರೀನಿಧಿ, ಬೈಂದೂರು ಉಪವಿಭಾಗದ ಸಹಾಯಕ ಇಂಜಿನಿಯರ್ ರವಿಶಂಕರ್, ಅಂಗನವಾಡಿ ಕಾರ್ಯಕರ್ತರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಗಂಗೊಳ್ಳಿ, ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಸಮಿತಿಯ ಸರ್ವ ಸದಸ್ಯರು, ಕುಂಭಾಶಿ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!