spot_img
Monday, March 30, 2026
spot_img

ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ :ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಆಯೋಜಿಸಲ್ಪಟ್ಟ ಕುಂದಾಪುರ ತಾಲೂಕು ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಸರಸ್ಪತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆಯಿತು.
ಯಡಾಡಿ- ಮತ್ಯಾಡಿಯ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯ ೧೭ ರ ವಯೋಮಾನದ ಒಳಗಿನ ವಿದ್ಯಾರ್ಥಿಗಳಾದ ಯತೀಶ್ ಶೆಟ್ಟಿ ಗುಂಡು ಎಸೆತದಲ್ಲಿ ಪ್ರಥಮ, ಸನ್ವಿತ್ ಪಿ. ಶೆಟ್ಟಿ ೧೧೦ ಮಿ. ಹರ್ಡಲ್ಸ್ ನಲ್ಲಿ ಪ್ರಥಮ, ಸಿರಿಕಾ ಗುಂಡು ಎಸೆತ ದ್ವಿತೀಯ ಮತ್ತು ಪ್ರಧಾನ್ ಹೆಗ್ಡೆ ೨೦೦ ಮಿ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

೧೭ರ ವಯೋಮಾನದ ಒಳಗಿನ ೮೦೦ ಮಿ. ಓಟದ ಸ್ಪರ್ಧೆಯಲ್ಲಿ ಪ್ರಣೀತ್ ತೃತೀಯ ಸ್ಥಾನ ಮತ್ತು ಇಶಾನ್, ಪ್ರಣೀತ್, ಸನ್ಮಿತ್ ಪಿ ಶೆಟ್ಟಿ , ಪ್ರಧಾನ್ ಹೆಗ್ಡೆಯನ್ನು ಒಳಗೊಂಡ ರೀಲೇ ತಂಡವು ದ್ವಿತೀಯ ಸ್ಥಾನ ಗಳಿಸಿತು. ಹಾಗೂ ಪ್ರಾಥಮಿಕ ವಿಭಾಗದಲ್ಲಿ ರೋಶನ್ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿದ್ದು, ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ ಕುಮಾರ್ ಹಾಗೂ ಸೂರ್ಯ ಅವರು ಮಾರ್ಗದರ್ಶನ ಮಾಡಿದ್ದರು.

ಇವರನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿಯಾದ ಭರತ್ ಶೆಟ್ಟಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರಾದ ಅಗಸ್ಟಿನ್ ಕೆ.ಎ. ಇವರು ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಿದ್ದಾರೆ. ಹಾಗೂ ಶಾಲೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!