spot_img
Tuesday, March 31, 2026
spot_img

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ಶಾಖೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಕುಂದಾಪುರ, ಅ.19(ಜನಪ್ರತಿನಿಧಿ ವಾರ್ತೆ) ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಹೊಸೂರು ಶಾಖೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ನಡೆಯಿತು.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಶಿಲಾನ್ಯಾಸ ನೆರವೇರಿಸಿ, ಸಹಕಾರ ಸಂಘಗಳು ಗ್ರಾಮಾಂತರ ಪ್ರದೇಶದ ಜನರ ಒಡನಾಡಿಯಂತೆ ಕಾರ್ಯನಿರ್ವಹಿಸುತ್ತಿದೆ. ಆ ಹಿನ್ನೆಲೆ ಹೊಸೂರಿನಲ್ಲಿ ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘವು ಜನರ ಅವಶ್ಯಕತೆಗಳನ್ನು ಪೂರೈಸುವ ಮೂಲಕ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ನಮ್ಮ ಸಂಘವು ಕಾರ್ಯವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಶಾಖೆ ಆರಂಭಿಸಲಾಗಿದೆ. ಇಡೂರು ಶಾಖೆಗೆ ಸ್ವಂತ ಸ್ಥಳದಲ್ಲಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ಕೆರಾಡಿಯಲ್ಲಿ ಸ್ವಂತ ಕಟ್ಟಡ ಹೊಂದಿದೆ. ಬೆಳ್ಳಾಲದಲ್ಲಿ ಶಾಖಾ ಕಟ್ಟಡಕ್ಕೆ ಸ್ಥಳ ಗುರುತಿಸಲಾಗಿದೆ. ಹೊಸೂರು ಶಾಖೆಯ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದ್ದು ಮಾರ್ಚ್ ಒಳಗೆ ಕಟ್ಟಡ ನಿರ್ಮಾಣವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ.ಅತುಲ್ ಕುಮಾರ್ ಶೆಟ್ಟಿ, ಸ್ಥಳದಾನಿ ಎಚ್.ಭೋಜರಾಜ ಶೆಟ್ಟಿ, ರಮಾನಂದ ಮಧ್ಯಸ್ಥ, ಸಂಘದ ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ ಹೊಸೂರು, ನಿರ್ದೇಶಕರಾದ ಐ.ಗೋವರ್ದನ್ ಶೆಟ್ಟಿ ಇಡೂರು-ಕುಂಜ್ಞಾಡಿ, ಕೆ.ಭುಜಂಗ ಶೆಟ್ಟಿ ಕೆರಾಡಿ, ಸಂಜೀವ ಪೂಜಾರಿ ವಂಡ್ಸೆ, ಎ.ಜಯರಾಮ ಶೆಟ್ಟಿ ವಂಡ್ಸೆ, ಶೀನಪ್ಪ ಶೆಟ್ಟಿ ಹೊಸೂರು, ರಾಮಚಂದ್ರ ಮಂಜ ಚಿತ್ತೂರು, ಕೃಷ್ಣಯ್ಯ ಆಚಾರ್ಯ ಚಿತ್ತೂರು, ಶ್ರೀಮತಿ ನಾಗರತ್ನ ಶೆಟ್ಟಿ ಹೊಸೂರು, ಶ್ರೀಮತಿ ಕಸ್ತೂರಿ ಎಸ್.ಶೆಟ್ಟಿ ಚಿತ್ತೂರು, ಬಿ.ರಾಮ ಹೊಸೂರು, ಸುನೀಲ ನಾಯ್ಕ ಕೆರಾಡಿ, ಪದನಿಮಿತ್ತ ಸದಸ್ಯರಾದ ಶೇಖರ ಶೆಟ್ಟಿ ಬೆಳ್ಳಾಲ, ಶಿವಪ್ಪ ಶೆಟ್ಟಿ ಇಡೂರು ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಜಿ. ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!