spot_img
Wednesday, April 1, 2026
spot_img

ಅ.21 ರಂದು ಶಾಲಾ ಶಿಕ್ಷಕರ ನೇಮಕಾತಿಗೆ ಕೌನ್ಸಲಿಂಗ್

ಉಡುಪಿ: ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ -2022 ರ ನೇಮಕಾತಿಗೆ ಸಂಬಂಧಿಸಿದಂತೆ 2023 ರ ಮಾರ್ಚ್ 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್

https:schooleducation.karnataka.gov.in ನಲ್ಲಿ ಪ್ರಕಟಿಸಲಾಗಿರುತ್ತದೆ.

ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಅಕ್ಟೋಬರ್ 21 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಸರಕಾರಿ  ಬಾಲಕಿಯರ ಪೂರ್ವ ಕಾಲೇಜು (ಪ್ರೌಢ ವಿಭಾಗ) ಇಲ್ಲಿನ ಸವ್ಯಸಾಚಿ ಸಭಾಭವನದಲ್ಲಿ ಕೌನ್ಸಲಿಂಗ್ ನಡೆಯಲಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳು ನೇಮಕಾತಿಗೆ ಸಂಬAಧಪಟ್ಟ ಅಗತ್ಯ ದಾಖಲೆ ಹಾಗೂ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಹಾಜರಾಗಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2574878 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!