spot_img
Friday, May 1, 2026
spot_img

ಕುಂದಾಪುರ ತಾಲ್ಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ ಎಂ. ವಿಠ್ಠಲ ಶೆಟ್ಟಿ ನಿಧನ

ಕುಂದಾಪುರ: ಕುಂದಾಪುರ ತಾಲೂಕು ಭೂ ನ್ಯಾಯ ಮಂಡಳಿಯ ಮಾಜಿ ಸದಸ್ಯ ಎಂ. ವಿಠ್ಠಲ ಶೆಟ್ಟಿ (83ವ) ಮೋರ್ಟು ಪಡುಮನೆ ಇವರು ಗುರುವಾರ ಸ್ವಗೃಹದಲ್ಲಿ ನಿಧನರಾದರು.

ಇವರು ಕೆರಾಡಿ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರಾಗಿ, ಒಕ್ಕಲು ಭೂ ಮಸೂದೆ ಕಾನೂನಿನ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಊರಿನ ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿದ್ದರು. ಸಾಮಾಜಿಕ ನ್ಯಾಯ ತತ್ವದಡಿ ರಾಜಕೀಯ ಜೀವನ ನಡೆಸಿ ಊರಿನ ಅಭಿವೃದ್ಧಿಗೆ ಶ್ರಮಿಸಿದ್ದರು. ಹೋರಾಟ, ಸಂಘಟನೆ, ಸಾಮಾಜಿಕ ಚಟುವಟಿಕೆಗಳ ಮೂಲಕ ಜನಾನುರಾಗಿಯಾಗಿದ್ದರು.

ಮೃತರು ನಾಲ್ವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು, ಬಂಧುಬಳಗವನ್ನು ಅಗಲಿದ್ದಾರೆ.

ಸಂತಾಪ:
ಎಂ. ವಿಠ್ಠಲ ಶೆಟ್ಟಿ ಅವರ ನಿಧನಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಕೆರಾಡಿ ಪ್ರಸನ್ನ ಕುಮಾರ್ ಶೆಟ್ಟಿ, ಸಬ್ಲಾಡಿ ಮಂಜಯ್ಯ ಶೆಟ್ಟಿ, ಸುದರ್ಶನ್ ಶೆಟ್ಟಿ ಬೆಳ್ಳಾಲ, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಶಂಕರನಾರಾಯಣ ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗೆದ್ದೆ, ತಾಲೂಕು ಪಂಚಾಯತ್ ಮಾಜಿ ಸದಸ್ಯ ದೇವದಾಸ್ ಶೆಟ್ಟಿ, ಮಾನಂಜೆ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ರಘುರಾಮ ಶೆಟ್ಟಿ ಆಜ್ರಿ, ವಂಡ್ಸೆ ಸಹಕಾರಿ ಬ್ಯಾಂಕಿನ ಸಿಬ್ಬಂದಿಗಳು, ಶಂಕರ ಶೆಟ್ಟಿ ಮೋರ್ಟು, ಸತೀಶ ಶೆಟ್ಟಿ ಮುಳ್ಳುಹಕ್ಲು, ಊರಿನ ಗಣ್ಯರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಸಂತಾಪ ಸೂಚಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!