spot_img
Thursday, April 30, 2026
spot_img

ಗಂಗೊಳ್ಳಿ: 49ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಆರಂಭ

ಗಂಗೊಳ್ಳಿ : ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಶಾರದಾ ಮಹೋತ್ಸವದ 49ನೇ ವರ್ಷದ ಸಮಾರಂಭ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಶುಕ್ರವಾರ ಆರಂಭಗೊಂಡಿದೆ.

ಬೆಳಿಗ್ಗೆ ಗಂಗೊಳ್ಳಿಯ ಶ್ರೀ ವೀರ ವಿಠಲ ದೇವಸ್ಥಾನದ ಬಳಿಯಿಂದ ಶ್ರೀ ಶಾರದಾ ವಿಗ್ರಹವನ್ನು ಮೆರವಣಿಗೆಯಲ್ಲಿ ತಂದು ಶ್ರೀ ಶಾರದಾ ಮಂಟಪದಲ್ಲಿ ಮಧ್ಯಾಹ್ನ ಶುಭ ಮುಹೂರ್ತದಲ್ಲಿ ಪ್ರತಿಷ್ಠಾಪಿಸಲಾಯಿತು. ಪುರೋಹಿತರಾದ ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿತು. ಸಮಿತಿಯ ಅಧ್ಯಕ್ಷ ಗೋಪಾಲ ಖಾರ್ವಿ ದಾವನಮನೆ, ಪ್ರಧಾನ ಕಾರ್ಯದರ್ಶಿ ಶೇಖರ ಜಿ., ಕಾರ್ಯದರ್ಶಿ ನಿತಿನ್ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಕಾರ್ಯದರ್ಶಿ ಸ್ವಾತಿ ಮಡಿವಾಳ, ಪ್ರಮುಖರಾದ ಸತೀಶ ಜಿ., ಉದಯಶಂಕರ ರಾವ್, ಬಿ.ಲಕ್ಷ್ಮೀಕಾಂತ ಮಡಿವಾಳ, ವೆಂಕಟೇಶ ಶೆಣೈ, ರಘುವೀರ ಕೆ., ಸಂದೀಪ ಖಾರ್ವಿ, ಟಿ.ವಾಸುದೇವ ದೇವಾಡಿಗ, ಗೋಪಾಲ ಖಾರ್ವಿ, ವೈ.ಸುರೇಶ ಖಾರ್ವಿ, ಅಶೋಕ ಖಾರ್ವಿ, ಎಂ.ನಾಗೇಂದ್ರ ಪೈ, ಸಮಿತಿಯ ಪದಾಧಿಕಾರಿಗಳು, ಭಕ್ತಾದಿಗಳು, ಮತ್ತಿತರರು ಉಪಸ್ಥಿತರಿದ್ದರು. ಅ.೨೫ರಂದು ಸಂಜೆ ಶ್ರೀದೇವಿಯ ವಿಗ್ರಹದ ಜಲಸ್ತಂಭನ ಕಾರ್ಯಕ್ರಮ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!