Sunday, September 8, 2024

ಗಂಗೊಳ್ಳಿ : 49ನೇ ವರ್ಷದ ಶ್ರೀ ಶಾರದೋತ್ಸವ ಸಂಪನ್ನ

ಕುಂದಾಪುರ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 49ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಬುಧವಾರ ಶಾರದಾ ಮೂರ್ತಿಯ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತು.

ಶ್ರೀ ಶಾರದಾ ಮಂಟಪದ ಬಳಿಯಿಂದ ಪ್ರಾರಂಭಗೊಂಡ ಪುರಮೆರವಣಿ ಮೇಲ್‌ಗಂಗೊಳ್ಳಿ ಬಾವಿಕಟ್ಟೆ ತನಕ ಸಾಗಿ ಮುಖ್ಯರಸ್ತೆಯ ಮೂಲಕ ಬಂದರು ಪೋರ್ಟ್ ಆಫೀಸಿನ ಬಳಿ ಕೊನೆಗೊಂಡಿತು. ಬಂದರು ಪೋರ್ಟ್ ಆಫೀಸಿನ ಸಮೀಪ ಪಂಚಗಂಗಾವಳಿ ನದಿಯಲ್ಲಿ ಶ್ರೀ ಶಾರದಾ ಮೂರ್ತಿಯ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು. ಪುರಮೆರವಣಿಗೆಯಲ್ಲಿ ಚಂಡೆ ವಾದನ, ಟ್ಯಾಬ್ಲೋಗಳು, ಹುಲಿವೇಷ, ಛದ್ಮವೇಷಗಳು ಹಾಗೂ ಇನ್ನಿತರ ಕಲಾತಂಡಗಳು ಮೆರಗು ನೀಡಿದ್ದವು. ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿತು. ಸಮಿತಿಯ ಅಧ್ಯಕ್ಷ ಗೋಪಾಲ ಖಾರ್ವಿ ದಾವನಮನೆ, ಪ್ರಧಾನ ಕಾರ್ಯದರ್ಶಿ ಶೇಖರ ಜಿ., ಕಾರ್ಯದರ್ಶಿ ನಿತಿನ್ ಖಾರ್ವಿ, ಮಹಿಳಾ ಮಂಡಳಿ ಅಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಕಾರ್ಯದರ್ಶಿ ಸ್ವಾತಿ ಮಡಿವಾಳ, ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಭಜಕರು, ಮತ್ತಿತರರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಕುಂದಾಪುರ ಡಿವೈ‌ಎಸ್‌ಪಿ ಬೆಳ್ಳಿಯಪ್ಪ ಮಾರ್ಗದರ್ಶನದಲ್ಲಿ ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸವಿತ್ರ ತೇಜ ಹಾಗೂ ಗಂಗೊಳ್ಳಿ ಪೊಲೀಸ್ ಉಪನಿರೀಕ್ಷಕ ಹರೀಶ್ ಆರ್. ಮತ್ತು ಕುಂದಾಪುರ ಪೊಲೀಸ್ ಉಪವಿಭಾಗದ ಉಪನಿರೀಕ್ಷಕರ ನೇತೃತ್ವದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!