spot_img
Thursday, April 30, 2026
spot_img

ಶ್ರೀ ನಾರಾಯಣ ಗುರು ಯುವಕ ಮಂಡಲ: ಸಂಭ್ರಮದ ಕುಂದಾಪುರ ದಸರಾ ಸಂಪನ್ನ

ಕುಂದಾಪುರ: (ಜನಪ್ರತಿನಿಧಿ ವಾರ್ತೆ) ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರದ ವತಿಯಿಂದ ನವರಾತ್ರಿ ಪ್ರಯುಕ್ತ ’ಕುಂದಾಪುರ ದಸರಾ’ ಕುಂದಾಪುರ ನಾರಾಯಣ ಗುರು ಕಲ್ಯಾಣ ಮಂದಿರದಲ್ಲಿ ವಿಜೃಂಭಣೆಯಿಂದ ನಡೆಯಿತು.

ರವಿವಾರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಅವರು ಮಾತನಾಡಿ ನಾರಾಯಣ ಗುರು ಯುವಕ ಮಂಡಲ ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವಾಮನೋಭಾವದ ಮೂಲಕ ಗುರುತಿಸಿಕೊಂಡಿದೆ. ಸಮಾಜದ ಮಕ್ಕಳು ಹಾಗೂ ಬೇರೆ ಸಮಾಜದ ಮಕ್ಕಳಿಗೂ ಪ್ರೋತ್ಸಾಹ ನೀಡುವ ಮೂಲಕ ಇತರ ಸಮಾಜಗಳಿಗೆ ಮಾದರಿಯಾಗಿದೆ ಎಂದರು.

ಶ್ರೀ ನಾರಾಯಣ ಗುರು ಯುವಕಮಂಡಲದ ಅಧ್ಯಕ್ಷ ಯೋಗೇಶ್ ಪೂಜಾರಿ ಕೋಡಿ ಅಧ್ಯಕ್ಷತೆ ವಹಿಸಿದ್ದರು. ಪಂಜುರ್ಲಿ ಹೊಟೇಲ್ ಗ್ರೂಪ್ ಆಫ್ ಹೊಟೇಲ್ಸ್ ಹುಬ್ಬಳ್ಳಿ ಇದರ ಆಡಳಿತ ನಿರ್ದೇಶಕ ವಿಜಯ ಪಿ ಪೂಜಾರಿ, ಕುಂದಾಪುರದ ಶ್ರೀ ನಾರಾಯಣ ಗುರು ಮಹಿಳಾ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷೆ ಗುಣರತ್ನ ರಾಮ ಪೂಜಾರಿ, ಕುಂದಾಪುರ ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ಸುಮನ ಬಿದ್ಕಲ್‌ಕಟ್ಟೆ, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸೀತಾರಾಮ ಕುಮಾರ್ ಕಟೀಲು, ಯುವ ಭಾಗವತೆ ಸಿಂಚನಾ ಪೂಜಾರಿ ಶಿವಪುರ, ಕುಸ್ತಿ ಪಟು ಪ್ರದೀಪ್ ಕುಮಾರ್ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ರಾಜೇಶ್ ಕಡ್ಗಿಮನೆ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ಪೂಜಾರಿ ಹಳೆ‌ಅಳಿವೆ ವಂದಿಸಿದರು. ಬಳಿಕ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಶಿವ ಪಂಚಾಕ್ಷರಿ ಎನ್ನುವ ಯಕ್ಷಗಾನ ಪ್ರದರ್ಶನ ನಡೆಯಿತು.

ಭಾನುವಾರ ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ಕುಟುಂಬಿಕರು ನಡೆಸಿದ ಚಂಡಿಕಾ ಯಾಗ ಸಂಪನ್ನಗೊಂಡಿದ್ದು ಯಾಗದ ಪೂರ್ಣಾಹುತಿ ವೇಳೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ ನೀಡಿದರು.

ಈ ಸಂದರ್ಭ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ ಮತ್ತು ಪದಾಧಿಕಾರಿಗಳು, ಶ್ರೀ ನಾರಾಯಣ ಗುರು ಯುವಕಮಂಡಲದ ಅಧ್ಯಕ್ಷ ಯೋಗೇಶ್ ಪೂಜಾರಿ ಕೋಡಿ ಹಾಗೂ ಪದಾಧಿಕಾರಿಗಳು, ಬಿಲ್ಲವ ಸಮಾಜದ ಪ್ರಮುಖರಿದ್ದರು. ಯೋಗೇಶ್ ಪೂಜಾರಿ, ಕುಟುಂಬಿಕರಿಂದ ಭಾನುವಾರ ಅನ್ನಸಂತರ್ಪಣೆ ನಡೆಯಿತು.
ಅ.24ರಂದು ಸಂಜೆ ವೈಭವದ ಶೋಭಾಯಾತ್ರೆ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!