Sunday, September 8, 2024

ಕೋಟ ಕೆ.ಕೃಷ್ಣ ಹಂದೆ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ

ಕೋಟ: ಸ್ವರಾಜ್ಯ-75 ತಂಡದ 26ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾರ್ಯಕ್ರಮ ರಾಷ್ಟ್ರೀಯ ಸೇವಾ ಯೋಜನೆ ಘಟಕ ಶ್ರೀ ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ, ಹಸ್ತ ಚಿತ್ರ ಫೌಂಡೇಶನ್ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಭಗತ್ ಸಿಂಗ್ ಯುವ ವೇದಿಕೆ ಕೋಟ ಇವರ ಸಹಕಾರದೊಂದಿಗೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ ಕೆ ಕೃಷ್ಣ ಹಂದೆ ಇವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮ ಫಲಕ ಅನಾವರಣ ಕಾರ್ಯಕ್ರಮ ನಡೆಯಿತು.

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ನಾವುಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿ ರಾಮಚಂದ್ರ ಐತಾಳ್ ಶುಭಾಶಂಸನೆಗೈದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಅವಿನಾಶ್ ಕಾಮತ್ ನಾಮಫಲಕ ಅನಾವರಣ ಮಾಡಿದರು. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಯ ರ ಕೊಡುಗೆಯೊಂದಿಗೆ ಕೋಟ ಕೆ ಕೃಷ್ಣ ಹಂದೆ ಕೃಷ್ಣರಾವ್ ಇವರ ಸೇವೆಯ ವಿಚಾರದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ನರೇಂದ್ರ ಕುಮಾರ್ ಕೋಟ ವಿಚಾರ ಹಂಚಿಕೊಂಡರು.

ಬಸ್ರೂರು ಸೌಪರ್ಣಿಕಾ ಗಾಂಧೀಜಿಯವರ ಚಿತ್ರ ಬಿಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು. ಗ್ರಾಮ ಪಂಚಾಯತ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳಿಗೆ ಗೌರವ ಸನ್ಮಾನ ಮಾಡಲಾಯಿತು. ಡಾ.ಸುನೀತಾ ವಿ,ರಮೇಶ್ ಹಂದೆ, ಯಜ್ಞೇಶ ಹಂದೆ ಸಾದ್ ಕೋಟ ವಿಚಾರ ಹಂಚಿಕೊಂಡರು. ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಾರಿಕೆರೆ ವಹಿಸಿದ್ದರು.

ಡಾ.ರಮೇಶ್ ಆಚಾರ್ಯ ಬಸ್ರೂರು, ಮಚ್ಚಾರು ರಾಷ್ಟ್ರೀಯ ಸೇವಾ ಯೋಜನೆ ಘಟಕ ವಿದ್ಯಾರ್ಥಿಗಳು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರು, ಉಪಸ್ಥಿತರಿದ್ದರು.

ಸ್ವರಾಜ್ಯ -75 ಸಂಚಾಲಕ ಪ್ರದೀಪ ಕುಮಾರ್ ಬಸ್ರೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಸಹನಾ ಕಾರ್ಯಕ್ರಮ ನಿರ್ವಹಿಸಿ, ಶಿಕ್ಷಕಿ ನಾಗರತ್ನ ಹೇರ್ಳೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!