spot_img
Thursday, April 30, 2026
spot_img

ಕಾಂಗ್ರೆಸ್ ಸರ್ಕಾರದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಹಣವಿಲ್ಲ : ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಜನಪ್ರತಿನಿಧಿ ವಾರ್ತೆ : ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ಅನುದಾನದ ಆಸೆರೆ ಇಲ್ಲ ಎಂಬ  ಪತ್ರಿಕಾ ವರದಿಯನ್ನು ಉಲ್ಲೇಖಿಸಿ ಆರೋಪಿಸಿ ರಾಜ್ಯ ಬಿಜೆಪಿ, ಕಾಂಗ್ರೆಸ್‌ ಸರ್ಕಾರ ವಿರುದ್ಧ ಹರಿಹಾಯ್ದಿದೆ.

ಸಾಮಾಜಿಕ ಜಾಲತಾಣ  ʼಎಕ್ಸ್‌ʼ ನ ತನ್ನ ಅಧಿಕೃತ ಖಾತೆಯಲ್ಲಿ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ ಬಿಜೆಪಿ, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಹಣವಿಲ್ಲ, ಹಂಪಿ ಉತ್ಸವಕ್ಕೆ ಹಣವಿಲ್ಲ, ಅದ್ದೂರಿ ದಸರಾಕ್ಕೆ ಹಣವಿಲ್ಲ, ಈಗ ಕನ್ನಡ ರಾಜ್ಯೋತ್ಸವ ಆಚರಣೆಗೂ ಸಹ ಹಣವಿಲ್ಲ, ಆದರೆ ಸಚಿವರಿಗೆ ಐಷಾರಾಮಿ ಕಾರು ಕೊಳ್ಳಲು ಮಾತ್ರ ಭರಪೂರ ಹಣವಿದೆ ಎಂದು ತಿವಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಕೂಡ ಸಾಮಾಜಿಕ ಜಾಲತಾಣದ ಮೂಲಕವೇ ತರಾಟೆಗೆ ತೆಗೆದುಕೊಂಡ ಬಿಜೆಪಿ, ಸಿಎಂ ಸಿದ್ದರಾಮಯ್ಯ ಅವರೇ, ಕನ್ನಡವನ್ನು ಕಂಡರೆ ನಿಮಗೇಕೆ ಈ ಪರಿ ದ್ವೇಷ ! ಪಂಚ ರಾಜ್ಯಗಳ ಚುನಾವಣಾ ಖರ್ಚಿಗೆ ಕಲೆಕ್ಷನ್‌ ಮಾಡುವಲ್ಲಿ ನಿಮಗಿರುವ ಬದ್ದತೆ, ಕನ್ನಡ ರಾಜ್ಯೋತ್ಸವದ ಆಚರಣೆಯಲ್ಲಿ ಇಲ್ಲ ಏಕೆ??!! ಎಂದು ಪ್ರಶ್ನೆ ಮಾಡಿದೆ.

ಮಾತ್ರವಲ್ಲದೇ, ಕಾಂಗ್ರೆಸ್‌ ವಿರುದ್ಧ #NadaDrohiCongress ಅಡಿಯಲ್ಲಿ ಅಭಿಯಾನ ಆರಂಭಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!